– 10ನೇ ತರಗತಿ ವಿದ್ಯಾರ್ಥಿಯಿಂದ ಚಾಕು ಇರಿತದ ಬೆದರಿಕೆ
ಅಹಮದಾಬಾದ್: ತನಗೆ ಪರೀಕ್ಷೆಯಲ್ಲಿ ಕಾಪಿ ಮಾಡಲು ಬಿಡದ ವಿದ್ಯಾರ್ಥಿಗೆ ಮತ್ತೊಬ್ಬ ವಿದ್ಯಾರ್ಥಿ ಚಾಕು ಇರಿಯುವುದಾಗಿ ಬೆದರಿಕೆ ಹಾಕಿದ ಪ್ರಸಂಗವೊಂದು ಅಹಮಾದಾಬಾದ್ ನಲ್ಲಿ ನಡೆದಿದೆ.
ಈ ಘಟನೆ ಶನಿವಾರ ನಡೆದಿದೆ. ಕೃಷ್ಣನಗರದ ಪರೀಕ್ಷಾ ಕೇಂದ್ರದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಎಕ್ಸಾಂ ನಡೆಯುತ್ತಿದೆ. ಈ ವೇಳೆ ವಿದ್ಯಾರ್ಥಿ ಮತ್ತೊಬ್ಬ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದಾನೆ. ಘಟನೆ ಸಂಬಂಧ ಪೊಲೀಸರು ಐಪಿಸಿ ಸೆಕ್ಷನ್ 323 (ಹಲ್ಲೆ) ಹಾಗೂ 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement
Advertisement
ಸಂತ್ರಸ್ತ ಬಾಲಕನ ತಂದೆ ದೂರು ನೀಡಿದ್ದು, ದೂರಿನಲ್ಲಿ ನನ್ನ ಮಗ ಬೆಳಗ್ಗೆ 10 ಗಂಟೆಗೆ ಪರೀಕ್ಷೆ ಬರೆಯಲು ಹೋಗಿದ್ದಾನೆ. ಈ ವೇಳೆ ಆತನಿಗೆ ವಿದ್ಯಾರ್ಥಿಯೊಬ್ಬ ಬೆದರಿಕೆ ಹಾಕಿದ್ದಾನೆ ಎಂದು ತಿಳಿಸಿದ್ದಾರೆ.
Advertisement
ಬಾಲಕ ಪರೀಕ್ಷೆ ಬರೆಯಲು ಎಕ್ಸಾಂ ಹಾಲ್ ಗೆ ತೆರಳಿ ತನ್ನ ಸೀಟಿನಲ್ಲಿ ಕುಳಿತಿದ್ದಾನೆ. ಈತನ ಪಕ್ಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಬಂದು ಕುಳಿತುಕೊಂಡಿದ್ದಾನೆ. ಅಲ್ಲದೆ ತನಗೆ ನಿನ್ನ ಉತ್ತರ ಪತ್ರಿಕೆ ನಕಲಿ ಮಾಡಲು ತೋರಿಸುವಂತೆ ಹೇಳಿದ್ದಾನೆ. ಆದರೆ ಇದನ್ನು ಸಂತ್ರಸ್ತ ವಿದ್ಯಾರ್ಥಿ ನಿರಾಕರಿಸಿದ್ದಾನೆ. ಇದರಿಂದ ಸಿಟ್ಟುಗೊಂಡ ವಿದ್ಯಾರ್ಥಿ ಸಂತ್ರಸ್ತ ವಿದ್ಯಾರ್ಥಿ ನಿನ್ನನ್ನು ನೋಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಘಟನೆ ಬಳಿಕ ಸಂತ್ರಸ್ತ ವಿದ್ಯಾರ್ಥಿ ಕೂಡಲೇ ಕ್ಲಾಸ್ ಸೂಪರ್ ವೈಸರ್ ಬಳಿ ನಡೆದ ಘಟನೆಯನ್ನು ವಿರಿಸಿದ್ದಾನೆ. ಪರೀಕ್ಷೆ ಮುಗಿದ ಬಳಿಕ ಸಂತ್ರಸ್ತ ವಿದ್ಯಾರ್ಥಿ ಶಾಲೆಯಿಂದ ಹೊರಬಂದು ಮಠದ ಮುಂದೆ ನಿಂತಿದ್ದನು. ಈ ವೇಳೆ ಅಲ್ಲಿಗೆ ಬಂದ ವಿದ್ಯಾರ್ಥಿ ಸಂತ್ರಸ್ತ ವಿದ್ಯಾರ್ಥಿಗೆ ಹಿಗ್ಗಾಮುಗ್ಗ ಥಳಿಸಿ, ನೂಕಿ ತನ್ನ ಪಾಕೆಟ್ ನಲ್ಲಿದ್ದ ಚಾಕು ತೆಗೆದು ಬೆದರಿಸಿದ್ದಾನೆ.
ವಿದ್ಯಾರ್ಥಿ ಚಾಕು ತೆಗೆಯುತ್ತಿದ್ದಂತೆಯೇ ಭಯಗೊಂಡ ಸಂತ್ರಸ್ತ ವಿದ್ಯಾರ್ಥಿ ಅಲ್ಲಿಂದ ಓಡಿ ತನ್ನ ತಂದೆಗೆ ತಿಳಿಸಿದ್ದಾನೆ. ಮಗನ ಮಾತನ್ನು ಆಲಿಸಿದ ತಂದೆ ಕೂಡಲೇ ಪೊಲೀಸರ ಕಂಟ್ರೋಲ್ ರೂಮ್ ಗೆ ಕರೆ ಮಾಡಿ ವಿದ್ಯಾರ್ಥಿ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಆರೋಪಿ ಅಪ್ರಾಪ್ತನಾಗಿದ್ದು, ಆತನ ವಿರುದ್ಧ ಕ್ರಮಕೈಗೊಳ್ಳುವಾಗಿ ಕೃಷ್ಣನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ವಿ.ಆರ್ ಚೌಧರಿ ತಿಳಿಸಿದ್ದಾರೆ.