Connect with us

Corona

ಮಹಾರಾಷ್ಟ್ರದಿಂದ SSLC ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಕೊರೊನಾ

Published

on

– ಜಿಲ್ಲಾಡಳಿತದ ಮುನ್ನೆಚ್ಚರಿಕೆಯಿಂದ ತಪ್ಪಿದ ಅನಾಹುತ

ಯಾದಗಿರಿ: ಮಹಾರಾಷ್ಟ್ರದಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಯಾದಗಿರಿಗೆ ಬಂದಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವಿದ್ಯಾರ್ಥಿ ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತನಾಗಿದ್ದಾನೆ.

ಪಾಸಿಟಿವ್ ಬಂದ ವಿದ್ಯಾರ್ಥಿ ಮೂಲತಃ ಯಾದಗಿರಿ ತಾಲೂಕಿನ ಯಡ್ಡಳ್ಳಿ ಗ್ರಾಮದ ನಿವಾಸಿಯಾಗಿದ್ದು, ಲಾಕ್‍ಡೌನ್‍ನಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ಸಿಲುಕಿದ್ದನು. ಇಷ್ಟು ದಿನ ಮಹಾರಾಷ್ಟ್ರದಲ್ಲಿಯೇ ಇದ್ದ ವಿದ್ಯಾರ್ಥಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಈ ತಿಂಗಳ 22ರಂದು ಜಿಲ್ಲೆಗೆ ಬಂದಿದ್ದನು.

ವಿದ್ಯಾರ್ಥಿ ಅಂತರ್ ರಾಜ್ಯ ಪ್ರಯಾಣದ ಹಿನ್ನೆಲೆ ಜಿಲ್ಲಾಡಳಿತ ಮುಂಜಾಗ್ರತೆ ವಹಿಸಿ ವಲಸೆ ಬಂದಿದ್ದ ವಿದ್ಯಾರ್ಥಿಯನ್ನು ವಡಗೇರಾದ ಕ್ವಾರೆಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಅಲ್ಲದೆ ವಿದ್ಯಾರ್ಥಿಯ ಸ್ಯಾಂಪಲ್ ಸಂಗ್ರಹ ಮಾಡಲಾಗಿತ್ತು. ಇಂದು ವರದಿ ಬಂದಿದ್ದು, ವರದಿಯಲ್ಲಿ ಕೊರೊನಾ ಪಾಸಿಟಿವ್ ಎಂದು ಬಂದಿದೆ.

ಮುನ್ನೆಚ್ಚರಿಕೆಯಾಗಿ ಜಿಲ್ಲಾಡಳಿತ ವಿದ್ಯಾರ್ಥಿಯನ್ನು ಇಂದು ಪರೀಕ್ಷೆ ಬರೆಯಲು ಬಿಟ್ಟಿರಲಿಲ್ಲ. ಸದ್ಯ ಸೋಂಕಿತ ವಿದ್ಯಾರ್ಥಿಯನ್ನು ಬಂದಳ್ಳಿಯ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಲಿ, ಚಿಕಿತ್ಸೆ ನೀಡಲಾಗುತ್ತಿದೆ.