Connect with us

Crime

ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು

Published

on

– 10 ದಿನದ ಬಳಿಕ ಮೃತಪಟ್ಟ ವಿದ್ಯಾರ್ಥಿನಿ

ಮಂಗಳೂರು: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬೆಳ್ತಂಗಡಿ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿನ್ಸಿ(20) ಮೃತ ವಿದ್ಯಾರ್ಥಿನಿ. ಈಕೆ ಗಂಡಿಬಾಗಿಲು ದೇವಗಿರಿ ಚೇನಪಳ್ಳಿ ವಿಜು ಅವರ ಪುತ್ರಿಯಾಗಿದ್ದಾಳೆ. ಬೆಳ್ತಂಗಡಿ ನಗರದ ಕಾಲೇಜೊಂದರ ಅಂತಿಮ ಬಿ. ಕಾಂ. ಓದುತಿದ್ದಳು.

ಮಾ.14 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ತಕ್ಷಣ ಅವಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸುಮಾರು 10 ದಿನಗಳ ಕಾಲ ನಡೆದ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾ.23 ರಂದು ರಾತ್ರಿ ಸಾವನ್ನಪ್ಪಿದ್ದಾಳೆ. ವಿನ್ಸಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *