ಬಳ್ಳಾರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿಯೊಬ್ಬ 3 ದಿನಗಳಿಂದ ನಾಪತ್ತೆಯಾಗಿರುವ ಘಟನೆ ಬಳ್ಳಾರಿ (Ballary) ಜಿಲ್ಲೆ ಸಂಡೂರು (Sanduru) ತಾಲೂಕಿನ ವಡ್ಡು ಗ್ರಾಮದಲ್ಲಿ ನಡೆದಿದೆ.
ನಾಪತ್ತೆಯಾಗಿರುವ ವಿದ್ಯಾರ್ಥಿಯನ್ನು ಸುಶಾಂತ್ ಎಂದು ಗುರುತಿಸಲಾಗಿದ್ದು, ವಿಜ್ಞಾನ (Science) ವಿಷಯದಲ್ಲಿ ಫೇಲ್ ಆಗಿದ್ದ.ಇದನ್ನೂ ಓದಿ: ಪಾಕಿಸ್ತಾನದ ನಟನ ಸಿನಿಮಾ ಭಾರತದಲ್ಲಿ ಬ್ಯಾನ್ ಮಾಡೋಕೆ ಅದೇನು ನೀಲಿಚಿತ್ರವಾ?- ಪ್ರಕಾಶ್ ರಾಜ್ ಕೆಂಡ
ಸುಶಾಂತ್ ವಡ್ಡು ಗ್ರಾಮದ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ. ಮೇ 2ರಂದು ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಷಯದಲ್ಲಿ ಫೇಲ್ ಆಗಿದ್ದ. ಇದರಿಂದ ಮನನೊಂದು ಮನೆ ಬಿಟ್ಟು ಹೋಗಿದ್ದಾನೆ. ಕಳೆದು ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಪೋಷಕರು ಹುಡುಕಾಟ ನಡೆಸಿದ್ದಾರೆ.
ತೋರಣಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಪಾಕಿಸ್ತಾನದ ಬುಡಕ್ಕೆ `ಜಲ’ಬಾಂಬ್ ಹಾಕಿದ ಭಾರತ!