ಉಡುಪಿ: ಜಿಲ್ಲೆಯ ಹೆಬ್ರಿ ತಾಲೂಕಿನ ಸರ್ಕಾರಿ ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣಾದ ಬೆನ್ನಲ್ಲೇ ಕಾಲೇಜು ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಹೆಬ್ರಿ ಕಾಲೇಜಿನ ವಿದ್ಯಾರ್ಥಿ ಚರಣ್ ಶೆಟ್ಟಿ (19) ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದನು.
ಹೆಬ್ರಿ ಕಾಲೇಜಿನಲ್ಲಿ ಪ್ರಥಮ ಬಿಕಾಂ ಕಲಿಯುತ್ತಿದ್ದ ವಿದ್ಯಾರ್ಥಿಗೆ ಉಪನ್ಯಾಸಕರು ಮಾನಸಿಕ ಕಿರುಕುಳ ನೀಡಿದ್ದರು ಎಂಬುದು ಸಹಪಾಠಿಗಳ ಆರೋಪವಾಗಿದೆ. ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದ ಚರಣ್ ಶೆಟ್ಟಿ ಕಾಲೇಜು ಡೇ ದಿನ ಮದ್ಯ ಸೇವಿಸಿ ಗಲಾಟೆ ಮಾಡಿದ್ದ. ಹೀಗಾಗಿ ವಿದ್ಯಾರ್ಥಿಯನ್ನು ಉಪನ್ಯಾಸಕರು ತರಾಟೆಗೆ ತೆಗೆದುಕೊಂಡಿದ್ದರು. ಪೋಷಕರ ಸಭೆಯಲ್ಲಿ ಉಪನ್ಯಾಸಕರ ಜೊತೆ ಚರಣ್ ವಾಗ್ವಾದ ಮಾಡಿದ್ದ. ಬಳಿಕ ತರಗತಿಯಲ್ಲೂ ನಡುವೆ ವಾದ, ಚರ್ಚೆ ನಡೆದಿತ್ತು. ಅದಾಗಿ ಆತನನ್ನು ತರಗತಿಯಿಂದ ಹೊರಗೆ ಕಳುಹಿಸಿದ್ದರು.
Advertisement
Advertisement
ಈ ನೋವು ಅವಮಾನದಿಂದ ಸಹಪಾಠಿಗಳಿಗೆ ಕರೆ ಮಾಡಿದ್ದ ಚರಣ್, ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಆತ್ಮಹತ್ಯೆಗೆ ಶರಣಾಗಿದ್ದನು. ಈ ಪ್ರಕರಣದ ಸಂಪೂರ್ಣ ತನಿಖೆ ನಡೆಸುವಂತೆ ಒತ್ತಾಯಿಸಿರುವ ವಿದ್ಯಾರ್ಥಿಗಳು ಇವತ್ತು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಇಂದು ಕಾಲೇಜಿಗೆ ರಜೆ ನೀಡಲಾಗಿತ್ತು. ಸಹಪಾಠಿಗಳು ಕಾಲೇಜಿಗೆ ಆಗಮಿಸಿ ಮೃತನ ಫೋಟೋ ಇಟ್ಟು ಮೌನ ಪ್ರಾರ್ಥನೆ ಸಲ್ಲಿಸಿದರು.
Advertisement
Advertisement
ರಜೆಯ ಹೊರತಾಗಿಯೂ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳು ಶಿಕ್ಷಕರನ್ನು ತರಾಟೆಗೆ ತಗೆದುಕೊಂಡರು. ಪ್ರಾಂಶುಪಾಲರು ಸೇರಿ ನಾಲ್ವರು ಉಪನ್ಯಾಸಕರ ಮೇಲೆ ಕೇಸು ದಾಖಲಿಸಿ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ದೂರು ದಾಖಲಿಸಿದರು.