ಹೈದರಾಬಾದ್: 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದ ವೇಳೆ ಶಾಲೆಯಲ್ಲಿದ್ದ ಸೀಲಿಂಗ್ ಫ್ಯಾನ್ ಕೆಳಗೆ ಬಿದ್ದು ವಿದ್ಯಾರ್ಥಿನಿ ಮುಖಕ್ಕೆ ಗಾಯವಾದ ಘಟನೆ ಆಂಧ್ರಪ್ರದೇಶದ ಶ್ರೀಸತ್ಯ ಸಾಯಿ ಜಿಲ್ಲೆಯ ಸ್ಥಳೀಯ ಶಾಲೆಯಲ್ಲಿ ನಡೆದಿದೆ.
ಈ ಬಗ್ಗೆ ಶಾಲೆಯ ಪ್ರಾಂಶುಪಾಲರು ಮಾತನಾಡಿ, ಪರೀಕ್ಷೆಗೆ ಎರಡು ದಿನದ ಮೊದಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೂ ಇಂತಹ ಘಟನೆ ನಡೆದಿರುವುದು ದುರದೃಷ್ಟಕರವಾಗಿದೆ. ಈ ಬಗ್ಗೆ ಕ್ರಮವನ್ನು ಕೈಗೊಳ್ಳಲಾಗುವುದು ಎಂದರು. ಗಾಯಗೊಂಡ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ನಂತರ ಪುನಃ ಆಕೆ ಪರೀಕ್ಷೆಯನ್ನು ಬರೆದಿದ್ದಾಳೆ.
Advertisement
Advertisement
ಈ ಹಿಂದೆ ಏಪ್ರಿಲ್ 28 ರಂದು ಕರ್ನೂಲ್‍ನ ಗೋನೆಗಂಡ್ಲ್‍ದಲ್ಲಿರುವ ಮಂಡಲ ಪರಿಷತ್ ಉರ್ದು ಶಾಲೆಯಲ್ಲಿ ತರಗತಿ ನಡೆಯುತ್ತಿದ್ದಾಗ ಸೀಲಿಂಗ್ ಫ್ಯಾನ್‍ನ ಒಂದು ಭಾಗ ಬಿದ್ದು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಇದನ್ನೂ ಓದಿ: ಬೆಂಗ್ಳೂರು ಆಯುಕ್ತರ ಕಚೇರಿಯಲ್ಲೇ ಸಿಕ್ಕಿಬಿದ್ದ ಪೊಲೀಸ್ ಕಳ್ಳ
Advertisement
Advertisement
ಈ ಘಟನೆಗೆ ಸಂಬಂಧಿಸಿ ಸರ್ಕಾರವನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡಿದ್ದು, ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರವನ್ನು ದೂಷಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಕಳಪೆ ಮೂಲಭೂತ ಸೌಕರ್ಯವಿದೆ ಎಂದು ಟೀಕಿಸಿದೆ. ಇದನ್ನೂ ಓದಿ: ಪತಿಯ ಕಿರುಕುಳ ತಾಳಲಾರದೇ ಪತ್ನಿ ನೇಣಿಗೆ ಶರಣು