ಲಕ್ನೋ: ಅಲಹಾಬಾದ್ ವಿಶ್ವವಿದ್ಯಾಲಯದ (Allahabad University) ವಿದ್ಯಾರ್ಥಿಯೊಬ್ಬ (Student) ತನ್ನ ಹಾಸ್ಟೆಲ್ (Hostel) ಕೊಠಡಿಯಲ್ಲಿ ಬಾಂಬ್ (Bomb) ತಯಾರಿಸುತ್ತಿದ್ದಾಗ ಅದು ಸ್ಫೋಟಗೊಂಡಿದ್ದು, ಈ ವೇಳೆ ವಿದ್ಯಾರ್ಥಿಗೆ ತೀವ್ರ ಗಾಯಗಳಾಗಿರುವ ಘಟನೆ ಬುಧವಾರ ಸಂಜೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಅಲಹಾಬಾದ್ ವಿವಿಯ ಎಂಎ ವಿದ್ಯಾರ್ಥಿಯಾಗಿರುವ ಪ್ರಭಾತ್ ಯಾದವ್ ಪಿಸಿ ಬ್ಯಾನರ್ಜಿ ಹಾಸ್ಟೆಲ್‌ನಲ್ಲಿರುವ ತನ್ನ ಕೊಠಡಿಯಲ್ಲಿ ಬಾಂಬ್ ತಯಾರಿಸುತ್ತಿದ್ದ. ಈ ಸಂದರ್ಭ ಅದು ಆತನ ಕೈಯಲ್ಲೇ ಸ್ಫೋಟಗೊಂಡಿದೆ. ಈ ಹಿನ್ನೆಲೆ ಆತನ ಬಲಗೈಗೆ ತೀವ್ರ ಗಾಯಗಳಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ರಾಜೇಶ್ ಕುಮಾರ್ ಯಾದವ್ ಹೇಳಿದ್ದಾರೆ. ಇದನ್ನೂ ಓದಿ: 45 ನಿಮಿಷಗಳ ಪಾಸ್ ಪಡೆದು 2 ಗಂಟೆ ಗ್ಯಾಲರಿಯಲ್ಲಿ ಕುಳಿತಿದ್ರು!
ವಿದ್ಯಾರ್ಥಿ ಏಕೆ ಬಾಂಬ್ ತಯಾರಿಸುತ್ತಿದ್ದ ಎಂಬುದು ತಿಳಿದುಬಂದಿಲ್ಲ. ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದ್ದು ಆತನನ್ನು ಎಸ್‌ಆರ್‌ಎನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪ್ರಭಾತ್ ಯಾದವ್ ವಿರುದ್ಧ ಶೀಘ್ರದಲ್ಲೇ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಸೋಶಿಯಲ್ ಮೀಡಿಯಾ ಖಾತೆ ಇಲ್ಲ – ಮನೋರಂಜನ್ ಬೆಂಗಳೂರು ನೆಟ್‌ವರ್ಕ್ ಯಾವುದು?

