ರಾಯಚೂರು: ಚಲಿಸುತ್ತಿದ್ದಂತೆಯೇ ಬಸ್ ನಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಗಾಯಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ.
ವಿದ್ಯಾರ್ಥಿನಿಯನ್ನು ಯಶೋಧ ಎಂದು ಗುರುತಿಸಲಾಗಿದ್ದು, ಈಕೆ ಜಿಲ್ಲೆಯ ಮಾನ್ವಿ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಮೂರನೇ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು.
Advertisement
ಎಂದಿನಂತೆ ಇಂದು ಕೂಡ ಯಶೋಧ ಬೆಳಗ್ಗೆ ಕಾಲೇಜಿಗೆ ಹೊರಟಿದ್ದರು. ಹೀಗೆ ಬಸ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬಸ್ ಚಾಲಕ ಕಾಲೇಜು ಬಳಿ ಆಕೆಗೆ ಬಸ್ ನಿಲ್ಲಿಸಲಿಲ್ಲ. ಹೀಗಾಗಿ ಯಶೋಧ ಬಸ್ ನಿಂದ ಹಾರಿದ್ದಾಳೆ. ಪರಿಣಾಮ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇದನ್ನೂ ಓದಿ: ಪತಿಯ ಜೊತೆ ಜಗಳವಾಡಿ ಮಗುವನ್ನು ಎತ್ತಿಕೊಂಡು ಚಲಿಸುತ್ತಿದ್ದ ಬಸ್ಸಿನಿಂದ ಜಿಗಿದ ಮಹಿಳೆ!
Advertisement
Advertisement
ಘಟನೆ ನಡೆದ ಕೂಡಲೇ ಸಾರ್ವಜನಿಕರು ಘಟನಾ ಸ್ಥಳದಲ್ಲಿ ವಿದ್ಯಾರ್ಥಿಗಳು ಜಮಾಯಿಸಿದ್ದು, ಸಾರಿಗೆ ಸಂಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಸಂಬಂಧ ಪ್ರತಿಭಟನೆಗೆ ಅನುವುಮಾಡಿಕೊಡಬೇಕು ಅಂತ ಪೊಲೀಸರಿಗೆ ಮನವಿ ಮಾಡಿದ್ದಾರೆ.
Advertisement
ಬಸ್ ನಿಲ್ದಾಣವಿಲ್ಲ: ಕಾಲೇಜು ಎದುರು ಬಸ್ ನಿಲ್ದಾಣವಿಲ್ಲದಿರುವುದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಕಾಲೇಜಿನಿಂದ ಕೆಲದೂರದಲ್ಲಿ ನಿಲ್ದಾಣವಿದ್ದು, ಇದರಿಂದ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಅನಾನುಕೂಲವಾಗಿತ್ತು. ಹೀಗಾಗಿ ಕಾಲೇಜು ಮುಂದೆಯೇ ಬಸ್ ನಿಲ್ದಾಣ ಮಾಡಬೇಕು ಅಂತ ಈ ಹಿಂದೆ ಹಲವು ಬಾರಿ ವಿದ್ಯಾರ್ಥಿಗಳು ಇಲಾಖೆಗೆ ಮನವಿ ಮಾಡಿದ್ದರು. ಆದ್ರೆ ಯಾವುದೇ ಪ್ರಯೋಜನವಾಗಿರಲಿಲ್ಲ ಅಂತ ವಿದ್ಯಾರ್ಥಿಗಳು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.