ಬೆಂಗಳೂರು: ಬಿಎಂಟಿಸಿ ಬಸ್ಸಿಗೆ 18 ವರ್ಷದ ವಿದ್ಯಾರ್ಥಿನಿಯೊಬ್ಬಳು ಬಲಿಯಾದ ಘಟನೆ ಇಂದು ನೆಲಮಂಗಲದಲ್ಲಿ ನಡೆದಿದೆ.
ಮೃತ ದುರ್ದೈವಿ ವಿದ್ಯಾರ್ಥಿನಿಯನ್ನು ಸುಷ್ಮಿತಾ ಎಂದು ಗುರುತಿಸಲಾಗಿದೆ. ಈಕೆ ನೆಲಮಂಗಲದ ಬಸವೇಶ್ವರ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬಿಎಂಟಿಸಿ ಬಸ್ನಲ್ಲಿ ಸ್ವಗ್ರಾಮ ಹುಲ್ಲೇಗೌಡನಹಳ್ಳಿಗೆ ಹೋಗುತ್ತಿದ್ದ ವೇಳೆ ಯುವತಿ ಬಸ್ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಬಸ್ ಆಕೆಯ ಮೇಲೆ ಹರಿದಿದೆ. ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಬಿಎಂಟಿಸಿ ಬಸ್ ಕೆಂಗೇರಿ 37ನೇ ಡಿಪೋಗೆ ಸೇರಿದ್ದಾಗಿದ್ದು, ಈ ಸಂಬಂಧ ನೆಲಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್ಬುಕ್ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews