ಕೋಲಾರ: ಅಂಬುಲೆನ್ಸ್ ಮೂಲಕ ಬಂದು ಸ್ಟ್ರೆಚರ್‌ನಲ್ಲಿ ಮಲಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Exam) ಬರೆದಿದ್ದ ವಿದ್ಯಾರ್ಥಿನಿ ಕುಸುಮಾ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿ ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ.
ಅಪಘಾತವಾಗಿ ಗಾಯಗೊಂಡ ವಿದ್ಯಾರ್ಥಿನಿ (Student) ಕುಸುಮಾ ಛಲ ಬಿಡದೆ ಸ್ಟ್ರೆಚರ್‌ನಲ್ಲಿ ಬಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದಳು. ಶಿಕ್ಷಣ ಇಲಾಖೆ ಹಾಗೂ ತಾಯಿಯ ನೆರವಿನೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಅಂಬುಲೆನ್ಸ್‌ನಲ್ಲಿ ಬಂದು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಕುಸುಮಾ ಫಸ್ಟ್ ಕ್ಲಾಸ್‌ನಲ್ಲಿ ಪಾಸ್ ಆಗಿದ್ದಾಳೆ. ಕೋಲಾರ (Kolar) ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಿನ್ನನಾಗಹಳ್ಳಿಯ ನಿವಾಸಿಯಾಗಿರುವ ಕುಸುಮಾ ಸದ್ಯ ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಇರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇದನ್ನೂ ಓದಿ: ಷೇರು ಮಾರುಕಟ್ಟೆಯಲ್ಲಿ ಲಕ್ಷ ಲಕ್ಷ ಲಾಸ್ – ನೇಣಿಗೆ ಶರಣಾದ ಯುವಕ
ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಸರ್ಜರಿ ಮಾಡಿಸಿಕೊಳ್ಳುತ್ತಿರುವ ಕುಸುಮಾ 625ಕ್ಕೆ 374 ಅಂಕ ಪಡೆದು ಅದೆಷ್ಟೋ ಜನರಿಗೆ ಮಾದರಿಯಾಗಿದ್ದಾಳೆ. ಇನ್ನೂ ಕುಸುಮಾಗೆ ಕೋಲಾರದ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಸೇರಿ ಸಾಕಷ್ಟು ಜನರು ನೆರವಾಗಿದ್ದರು. ಅಲ್ಲದೆ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಹ ಮನೆಗೆ ಭೇಟಿ ನೀಡಿ ನೆರವಾಗಿದ್ದರು. ಸದ್ಯ ಆಸ್ಪತ್ರೆಯಲ್ಲೂ ಚಿಕಿತ್ಸೆಗೆ ಸ್ಪಂದಿಸಿರುವ ಸುರೇಶ್ ಕುಮಾರ್, ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸಿದ್ದಾರೆ. ಇದನ್ನೂ ಓದಿ: ಹಿಂದಿಯಲ್ಲಿ ಕಳೆದ ವರ್ಷ 75 ಸಾವಿರ, ಈ ಬಾರಿ 9,481 ಮಂದಿ ಫೇಲ್



