ಚಾಮರಾಜನಗರ: ಶುಲ್ಕ ಕಟ್ಟದ ಹಿನ್ನಲೆಯಲ್ಲಿ ಶಾಲೆಯಲ್ಲಿ ಎಲ್ಲರ ಮುಂದೆ ಅವಮಾನವಾಗಿದ್ದಕ್ಕೆ ಮನನೊಂದ ವಿದ್ಯಾರ್ಥಿ ನಾಲ್ಕು ದಿನಗಳಿಂದ ಮನೆ ಬಿಟ್ಟು ನಾಪತ್ತೆಯಾಗಿದ್ದಾನೆ.
ಜಿಲ್ಲೆಯ ಕೊಳ್ಳೇಗಾಲದಲ್ಲಿರುವ ಲಯನ್ಸ್ ವಿದ್ಯಾ ಸಂಸ್ಥೆಯಲ್ಲಿ ಮನೋಜ್ 10 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಶಾಲೆಗೆ ಶುಲ್ಕ ಕಟ್ಟುವುದು ತಡವಾಗಿದ್ದಕ್ಕೆ ಮನೋಜ್ ಮೇಲೆ ಎಂಜಲು ನೀರು ಎರಚಿ ಶಾಲಾ ಆಡಳಿತ ಮಂಡಳಿಯ ಖಜಾಂಚಿ ಎಸ್.ಎನ್.ಪ್ರಸಾದ್ ಅವಮಾನ ಮಾಡಿದ್ದರು. ಶಾಲೆಯಲ್ಲಾದ ಅವಮಾನವನ್ನು ತಾಳಲಾರದೇ ಮನನೊಂದು ಮನೋಜ್ ನಾಲ್ಕು ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದಾನೆ. ಮಗ ಮನೆ ಬಿಟ್ಟು ಹೋಗಿರುವುದಕ್ಕೆ ಕಂಗಲಾಗಿರುವ ಪೋಷಕರು ಕಣ್ಣೀರಿಡುತ್ತಿದ್ದಾರೆ.
Advertisement
Advertisement
ತಮ್ಮ ಮಗನ ಮೇಲೆ ಹಲ್ಲೆ ಮಾಡಿ ಅವಮಾನ ಮಾಡಿರುವ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಶಾಲೆಯ ಖಜಾಂಚಿ ಪ್ರಸಾದ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
Advertisement
ಈಗಾಗಲೇ ಮನೋಜ್‍ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು, ಖಜಾಂಚಿ ಪ್ರಸಾದ್ ವಿರುದ್ಧ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv