ಮಂಡ್ಯ: ‘ಅಲ್ಲಾಹು ಅಕ್ಬರ್’ ಎಂದು ಕೂಗಿ ಸುದ್ದಿಯಾಗಿದ್ದ ವಿದ್ಯಾರ್ಥಿನಿ ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ಹಾರಿದ್ದಾರೆ.
ವಿದ್ಯಾರ್ಥಿನಿ ಮುಸ್ಕಾನ್ ಕುಟುಂಬ ಪೊಲೀಸರಿಗೆ ಯಾವುದೇ ಮಾಹಿತಿಯನ್ನು ನೀಡದೆ ಸೌದಿ ಪ್ರವಾಸಕ್ಕೆ ಹೊರಟಿದೆ. ಈ ಪ್ರವಾಸದ ಹಿಂದೆ ಏನಾದರೂ ಇದ್ಯಾ ಎಂಬುದರ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಳ್ಳುತ್ತಿದೆ. ಈ ಹಿಂದೆ ಮುಸ್ಕಾನ್ ಅಲ್ಲಾಹು ಅಕ್ಬರ್ ಎಂದು ಕೂಗಿ ಭಾರೀ ಸುದ್ದಿಯಾಗಿದ್ದರು. ಈ ಹೇಳಿಕೆ ಹಿನ್ನೆಲೆ ಉಗ್ರ ಸಂಘಟನೆ ಮೆಚ್ಚುಗೆ ವ್ಯಕ್ತಪಡಿಸಿತ್ತು. ಈ ವೇಳೆ ಮುಸ್ಕಾನ್ ವಿದೇಶಿ ಪ್ರವಾಸ ಕೈಗೊಂಡಿರುವುದು ಎಲ್ಲರ ಅನುಮಾನಕ್ಕೆ ಕಾರಣವಾಗಿದೆ.
Advertisement
Advertisement
ಅಲ್ ಖೈದಾ ಸಂಘಟನೆ ಮುಸ್ಕಾನ್ ಹೊಗಳಿ ಗುಣಗಾನ ಮಾಡಿತ್ತು. ಇದರಿಂದ ಮುಸ್ಕಾನ್ ಬಗ್ಗೆ ಹೆಚ್ಚು ತನಿಖೆ ಮಾಡುವಂತೆ ಆಗ್ರಹ ಮಾಡಲಾಗಿತ್ತು. ಪರಿಣಾಮ ಪೊಲೀಸ್ ಇಲಾಖೆ ಮುಸ್ಕಾನ್ ಮತ್ತು ಕುಟುಂಬದವರನ್ನು ವಿಚಾರಣೆ ನಡೆಸಿತ್ತು. ಈ ನಡುವೆ ಮುಸ್ಕಾನ್ ಮನೆಗೆ ಬಂದೋಗುವವರ ಮೇಲೆ ಪೊಲೀಸ್ ಇಲಾಖೆ ಒಂದು ಕಣ್ಣು ಇಟ್ಟಿತ್ತು. ಆದರೆ ಈ ಕುಟುಂಬ ಖಾಕಿಗೆ ಮಾಹಿತಿ ನೀಡದೆ ಕಳೆದ ಏಪ್ರಿಲ್ 25 ರಂದೇ ಸೌದಿಗೆ ತೆರಳಿದೆ. ಇದನ್ನೂ ಓದಿ: ಮುಸ್ಕಾನ್‍ರನ್ನು ತನಿಖೆ ನಡೆಸುವಂತೆ ಸಿಎಂಗೆ ಅನಂತ್‍ಕುಮಾರ್ ಹೆಗ್ಡೆ ಪತ್ರ
Advertisement
Advertisement
ಮುಸ್ಕಾನ್ ಕುಟುಂಬ ಧಾರ್ಮಿಕ ಪ್ರವಾಸಕ್ಕಾಗಿ ಸೌದಿ ಪ್ರವಾಸ ಎಂದು ಮಾಹಿತಿ ಸಿಕ್ಕಿದೆ. ಆದರೆ ಈ ಪ್ರವಾಸದ ಹಿಂದೆ ಇರುವ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಪೊಲೀಸ್ ಇಲಾಖೆಗೆ ಒತ್ತಾಯ ಪ್ರಾರಂಭವಾಗಿದೆ.