ಮೈಸೂರು: ಫಂಕ್ಷನ್‍ಗೆ ಕರೆದುಕೊಂಡು ಹೋಗದ್ದಕ್ಕೆ ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಶಾರದಾ ದೇವಿನಗರದಲ್ಲಿ ನಡೆದಿದೆ.
17 ವರ್ಷದ ಅಮಿತ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೈಸೂರಿನ ಮರಿಮಲ್ಲಪ್ಪ ಕಾಲೇಜಿನಲ್ಲಿ ಅಮಿತ್ ವಿಜ್ಞಾನ ವಿಷಯದಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದನು. ಅಮಿತ್ ತಂದೆ ಮಾಜಿ ಯೋಧರು. ಈಗ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಕುಟುಂಬದ ಕಾರ್ಯಕ್ರಮಕ್ಕೆ ತೆರಳುವ ವೇಳೆ ಅಮಿತ್ ನನ್ನು ಪೋಷಕರು ಕರೆದುಕೊಂಡು ಹೋಗದೆ ಪರೀಕ್ಷೆಗೆ ಓದುವಂತೆ ಹೇಳಿದ್ದರು. ಫಂಕ್ಷನ್‍ಗೆ ಕರೆದುಕೊಂಡು ಹೋಗದ ಹಿನ್ನೆಲೆಯಲ್ಲಿ ಬೇಸತ್ತ ಅಮಿತ್ ನೇಣಿಗೆ ಶರಣಾಗಿದ್ದಾನೆ.
ಈ ಬಗ್ಗೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.