– ನೆರೆಹೊರೆಯ ಆರು ಮಂದಿಯಿಂದ ಅತ್ಯಾಚಾರ
– ಆಸ್ಪತ್ರೆಯಿಂದ ತಪ್ಪಿಸಿಕೊಂಡಾಗ ಪ್ರಕರಣ ಬೆಳಕಿಗೆ
ಚೆನ್ನೈ: ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ಹತ್ತು ಮಂದಿ 9ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.
ಇದೀಗ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದು, ಮೂವರಿಗಾಗಿ ಶೋಧಕಾರ್ಯ ಶುರು ಮಾಡಿದ್ದಾರೆ. 15 ವರ್ಷದ ಸಂತ್ರಸ್ತೆ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿಯನ್ನು ವ್ಯಾಸಂಗ ಮಾಡುತ್ತಿದ್ದಳು. ಆದರೆ ಆಕೆಯ ಮೇಲೆ 2016 ರಿಂದ 10 ಮಂದಿ ಕಾಮುಕರು ನಿರಂತರವಾಗಿ ಸಾಮೂಹಿಕ ಅತ್ಯಾಚಾರ ಎಸಗುತ್ತಿದ್ದರು ಎಂದು ತಿಳಿದುಬಂದಿದೆ.
Advertisement
Advertisement
ಏನಿದು ಪ್ರಕರಣ?
ಸಂತ್ರಸ್ತೆಗೆ ವಿದ್ಯಾರ್ಥಿಯೊಬ್ಬ ಪರಿಚಯವಾಗಿ ಸ್ನೇಹಿತನಾಗಿದ್ದನು. ದಿನಕಳೆದಂತೆ ಆಕೆ ಆತನನ್ನು ಪ್ರೀತಿಸುತ್ತಿದ್ದಳು. ನಂತರ ಸಂತ್ರಸ್ತೆ ತನ್ನ ಸ್ನೇಹಿತನಿಂದ ಪದೇ ಪದೇ ಅತ್ಯಾಚಾರಕ್ಕೊಳಗಾಗಿದ್ದಳು. ಇದಾದ ಬಳಿಕ ಮತ್ತೆ ಸಂತ್ರಸ್ತೆಗೆ ಮೂವರು ವಿದ್ಯಾರ್ಥಿಗಳು ಸ್ನೇಹಿತರಾಗಿದ್ದಾರೆ. ಅವರು ಕೂಡ ಆಕೆಯ ಮೇಲೆ ಅತ್ಯಾಚಾರವೆಸಗಿದ್ದರು. ಆರು ತಿಂಗಳು ನಂತರ ಆಕೆಯ ನೆರೆಹೊರೆಯ ಇತರ ಆರು ಹುಡುಗರು ಸಂತ್ರಸ್ತೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ.
Advertisement
Advertisement
ಸಂತ್ರಸ್ತೆಯ ಪೋಷಕರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಆಕೆ ನಡೆದ ಯಾವುದೇ ಘಟನೆಯನ್ನು ಪೋಷಕರಿಗೆ ತಿಳಿಸಲಿಲ್ಲ. ಆದರೆ ಪೋಷಕರಿಗೆ ಮಗಳು ಗರ್ಭಿಣಿಯಾಗಿರುವ ಬಗ್ಗೆ ಗೊತ್ತಾಗಿದೆ. ತಕ್ಷಣ ಆಕೆಯನ್ನು ಗರ್ಭಪಾತ ಮಾಡಿಸಲು ನೀಲಂಬೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಲ್ಲಿ ಆಸ್ಪತ್ರೆಯ ಅಧಿಕಾರಿಗಳು ಭ್ರೂಣಹತ್ಯೆ ಮಾಡುವುದಿಲ್ಲ ಎಂದು ನಿರಾಕರಿಸಿದ್ದಾರೆ. ನಂತರ ಕೊಯಮತ್ತೂರಿನ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ.
ಈ ಮಧ್ಯೆ ಸಂತ್ರಸ್ತೆ ಶನಿವಾರ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದಾಳೆ. ತಕ್ಷಣ ಆಸ್ಪತ್ರೆಯವರು ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ. ಪೊಲೀಸರು ಸಂಜೆಯೊಳಗೆ ಸಂತ್ರಸ್ತೆಯನ್ನು ಹುಡುಕಿ ಪತ್ತೆಮಾಡಿದ್ದಾರೆ. ವಿಚಾರಣೆ ವೇಳೆ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ 10 ಮಂದಿ ಕಾಮುಕರು ಪದೇ ಪದೇ ಅತ್ಯಾಚಾರ ಎಸಗಿರುವ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾಳೆ.
ಸಂತ್ರಸ್ತೆಯ ಹೇಳಿಕೆಯ ನಂತರ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿದಂತೆ ಏಳು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಾದ ವಿದ್ಯಾರ್ಥಿಗಳನ್ನು ಲಕ್ಷ್ಮಿಮಿಲ್ಸ್ ಜಂಕ್ಷನ್ನಲ್ಲಿರುವ ಬಾಲಾಪರಾಧಿಗೆ ಕಳುಹಿಸಲಾಗಿದ್ದು, ಇತರ ಮೂವರನ್ನು ಅವಿನಾಶಿಯ ಉಪ ಜೈಲಿಗೆ ಕಳುಹಿಸಲಾಗಿದೆ. ಸದ್ಯಕ್ಕೆ ಮೂವರು ಆರೋಪಿಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.