ಬೆಂಗಳೂರು: ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ವಿದ್ಯಾರ್ಥಿಯನ್ನು ಕೊಚ್ಚಿ ಕೊಂದ ಘಟನೆ ತಡರಾತ್ರಿ ನಂದಿನಿ ಲೇಔಟ್‍ನ ಸರಸ್ವತಿಪುರದಲ್ಲಿ ನಡೆದಿದೆ.
ಉಮಾ ಮಹೇಶ್ವರ(20) ಕೊಲೆಯಾದ ವಿದ್ಯಾರ್ಥಿ. ಬುಧವಾರ ಸಂಜೆ ಗಣೇಶ ಲೇಔಟ್‍ನಲ್ಲಿ ಯುವಕರ ಗುಂಪು ಗಲಾಟೆ ಮಾಡಿಕೊಂಡಿತ್ತು. ಈ ವೇಳೆ ಎದುರಾಳಿ ತಂಡ ವಿದ್ಯಾರ್ಥಿಗೆ ಚಾಕುವಿನಿಂದ ಇರಿದಿತ್ತು. ಆದರೆ ಯಾವ ಕಾರಣಕ್ಕಾಗಿ ಗಲಾಟೆ ನಡೆದಿದೆ ಎಂಬುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ.
ಮಾರಣಾಂತಿಕ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಉಮಾ ಮಹೇಶ್ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಉಮಾ ಮಹೇಶ್ವರ ಇಂದು ಮುಂಜಾನೆ ಮೃತಪಟ್ಟಿದ್ದಾನೆ. ಇತ್ತ ಮಾರಣಾಂತಿಕವಾಗಿ ಹಲ್ಲೆ ಮಾಡಿದ ನಂತರ ತಂಡ ಪರಾರಿಯಾಗಿದೆ.
ವಿದ್ಯಾರ್ಥಿ ಮೇಲೆ ತಂಡವೊಂದು ಹಲ್ಲೆ ಮಾಡಿದ ವಿಷಯವನ್ನು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದರು. ಈ ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.