ಬೆಂಗಳೂರು: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿ(ರಾಷ್ಟ್ರೀಯ ಪೌರತ್ವ ನೊಂದಣಿ) ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಟೌನ್ ಹಾಲ್ ಮುಂಭಾಗ ಎಐಡಿಎಸ್ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಹೊಸ ಕಾಯ್ದೆಯ ವಿರುದ್ಧ ಗುಡುಗಿದರು. ಇಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಹಿಂದೂ ಮುಸ್ಲಿಂಗಳ ನಡುವಿನ ಸಮರ ಅಂತ ಬಿಂಬಿಸಲಾಗ್ತಿದೆ. ಇದು ತಪ್ಪು, ನಾವೆಲ್ಲರು ಒಂದೇ ಅಂತ ಹೇಳಿದರು. ಈ ವೇಳೆ ಅನುಮತಿ ಪಡೆಯದೆ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಸೇರಿದ್ದರಿಂದ ಪೊಲೀಸರು ಪ್ರತಿಭಟನೆಯನ್ನ ಕೈಬಿಡುವಂತೆ ಮನವಿ ಮಾಡಿದರು.
ಪೊಲೀಸರ ಮಾತಿಗೆ ಸೊಪ್ಪು ಹಾಕದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಲ ಕಾಲ ಪರಿಸ್ಥಿತಿ ನಿಯಂತ್ರಣಕ್ಕೆ ಬರದಿದ್ದಾಗ ಪೊಲೀಸರು ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿ ಪ್ರತಿಭಟನೆಯನ್ನ ಮೊಟಕುಗೊಳಿಸಿದರು.