ಬೆಂಗಳೂರು: ಪ್ರೀತಿ ವಿಚಾರಕ್ಕೆ ಯುವಕನನ್ನು ಕಿಡ್ನಾಪ್ ಮಾಡಿ ಬೆಂಕಿ ಹಚ್ಚಿದ್ದರಿಂದ ಗಂಭೀರ ಗಾಯಗೊಂಡಿದ್ದ ಶಶಾಂಕ್ (Shashank) ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಸಾವನ್ನಪ್ಪಿದ್ದಾನೆ.
ಆರ್‌ಆರ್ ನಗರದ ನಿವಾಸಿ ರಂಗನಾಥ್ ಹಾಗೂ ಸತ್ಯಪ್ರೇಮ ದಂಪತಿಯ ಪುತ್ರ ಶಶಾಂಕ್‌ನನ್ನು (19) ದುಷ್ಕರ್ಮಿಗಳು ಕಿಡ್ನಾಪ್ ಮಾಡಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಘಟನೆಯಿಂದಾಗಿ ಶಶಾಂಕ್ ದೇಹದ 90% ರಷ್ಟು ಭಾಗ ಸುಟ್ಟು ಹೋಗಿತ್ತು. ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಶಶಾಂಕ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಘಟನೆಯೇನು?
ನಗರದ ಖಾಸಗಿ ಕಾಲೇಜಿನಲ್ಲಿ ಯುವಕ ಸಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದ. ಶಶಾಂಕ್ ತನ್ನ ಸಂಬಂಧಿಕರ ಮಗಳೊಬ್ಬಳನ್ನು ಪ್ರೀತಿಸುತಿದ್ದ. ಇದಕ್ಕೆ ಯುವತಿಯ ಪೋಷಕರ ವಿರೋಧವಿತ್ತು. ಇದೇ ಕಾರಣಕ್ಕೆ ಕಾಲೇಜ್ ಬಳಿ ಇದ್ದ ಯುವಕನನ್ನು ಇನ್ನೋವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕಿಡ್ನಾಪ್ ಮಾಡಿ ಕೈ ಕಾಲು ಕಟ್ಟಿ ಬೆಂಕಿ ಹಚ್ಚಿದ್ದರು. ಇದನ್ನೂ ಓದಿ ಪ್ರೀತಿ ವಿಚಾರಕ್ಕೆ ಕಿರಿಕ್ – ಯುವಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು
ಇತ್ತೀಚೆಗೆ ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದ ಯುವತಿಯನ್ನು ಶಶಾಂಕ್ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಇದರಿಂದ ಅಸಮಾಧಾನಗೊಂಡಿದ್ದ ಯುವತಿಯ ಪೋಷಕರು ಆತನ ಮನೆಗೆ ನುಗ್ಗಿ ಗಲಾಟೆ ಮಾಡಿದ್ದರು. ಇದಾದ ಬಳಿಕ ಯುವತಿಯ ವಿಚಾರದಿಂದ ದೂರ ಇರುತ್ತೇನೆ ಎಂದು ಶಶಾಂಕ್ ಹೇಳಿದ್ದ. ಆದರೂ ದುಷ್ಕರ್ಮಿಗಳು ಶಶಾಂಕ್ ಮೇಲೆ ವಿಕೃತಿ ಮೆರೆದಿದ್ದರು. ಇದನ್ನೂ ಓದಿ: ಅಪ್ಪ-ಅಮ್ಮನ ತಲೆಗೆ ರಾಡ್‍ನಿಂದ ಹೊಡೆದು ಕೊಂದು ಮಗ ಎಸ್ಕೇಪ್!
Web Stories