ಬಳ್ಳಾರಿ: ಕಾಲೇಜಿನ ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹೊಸಪೇಟೆಯಲ್ಲಿ ನಡೆದಿದೆ.
ಹೊಸಪೇಟೆಯ ಶಂಕರ್ ಆನಂದಸಿಂಗ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ದ್ವೀತಿಯ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿರೋ ಅನ್ನಪೂರ್ಣ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ.
ಕಾಲೇಜಿನ 2 ಅಂತಸ್ತಿನ ಬಿಲ್ಡಿಂಗ್‍ನಿಂದ ಜಿಗಿದು ಅನ್ನಪೂರ್ಣ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕಟ್ಟಡದ ಮೇಲಿಂದ ವಿದ್ಯಾರ್ಥಿನಿ ಕೇಳಗೆ ಬಿಳುತ್ತಿದ್ದಂತೆ ಹೊಸಪೇಟೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಆದರೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದು ಯಾಕೆ ಅನ್ನೋದು ಇನ್ನೂ ತಿಳಿದುಬಂದಿಲ್ಲ.