DistrictsKarnatakaLatestTumakuru

ಹಾಸ್ಟೆಲ್‍ನಲ್ಲಿ ಉಪಹಾರ ಸೇವಿಸಿ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ

ತುಮಕೂರು: ವಿದ್ಯಾರ್ಥಿ ನಿಲಯದಲ್ಲಿ ಉಪಹಾರ ಸೇವಿಸಿ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಕೊನೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ಭಾನುವಾರ ಬೆಳಗ್ಗೆ ಕೊನೆಹಳ್ಳಿ ಗ್ರಾಮದಲ್ಲಿರುವ ಪಶುಸಂಗೋಪನಾ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿಗಳಿಗೆ ಎಂದಿನಂತೆ ಬೆಳಗ್ಗೆ ಉಪಹಾರವಾಗಿ ಇಡ್ಲಿ-ಸಾಂಬಾರ್ ವಿತರಿಸಲಾಗಿತ್ತು. ಆದರೆ ಇಡ್ಲಿ-ಸಾಂಬಾರ್ ಸೇವಿದ್ದ ಬಳಿಕ 16ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು.

ಕೂಡಲೇ ವಿದ್ಯಾರ್ಥಿಗಳನ್ನು ತಿಪಟೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿತ್ತು. ವೈದ್ಯರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ವಿದ್ಯಾರ್ಥಿಗಳು ಹಳಸಿದ್ದ ಇಡ್ಲಿ-ಸಾಂಬಾರ್ ತಿಂದು, ಫುಡ್ ಪಾಯ್ಸನ್ ಆಗಿ ಅಸ್ವಸ್ಥರಾಗಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ತಾಲೂಕು ಆಸ್ಪತ್ರೆಯ ವೈದ್ಯರು, ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನ್ ಆಗಿದ್ದರಿಂದ ಅಸ್ವಸ್ಥರಾಗಿದ್ದರು. ಕೂಡಲೇ ಅವರಿಗೆ ಆ್ಯಂಟಿ ಬಯೋಟಿಕ್ ನೀಡಿದ್ದರಿಂದ ಚೇತರಿಸಿಕೊಂಡಿದ್ದಾರೆಂದು ಹೇಳಿದ್ದಾರೆ. ಸದ್ಯ ಎಲ್ಲಾ ವಿದ್ಯಾರ್ಥಿಗಳು ಗುಣಮುಖರಾಗಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply

Your email address will not be published.

Back to top button