ಬೀದರ್: ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಕೊಠಡಿಗೆ ಪ್ರವೇಶ ನಿರಾಕರಣೆ ಮಾಡಿದ್ದಾರೆ ಎನ್ನಲಾದ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Advertisement
ಬೀದರ್ ಬ್ರೀಮ್ಸ್ ಮೇಡಿಕಲ್ ಕಾಲೇಜಿನಲ್ಲಿ ನರ್ಸಿಂಗ್ ಪರೀಕ್ಷೆಗೆ ಬುರ್ಕಾ ಧರಿಸಿಕೊಂಡು ಬಂದ ಹಲವು ವಿದ್ಯಾರ್ಥಿನಿಯರಿಗೆ ಅನುಮತಿ ನೀಡಿಲ್ಲ ಎನ್ನುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಹಿಜಬ್- ಕೇಸರಿ ಶಾಲು ವಿವಾದ- ಹೋರಾಟಕ್ಕಾಗಿಯೇ ವಿದ್ಯಾರ್ಥಿಗಳು ಟ್ವಿಟ್ಟರ್ ಖಾತೆ ಓಪನ್..!
Advertisement
Advertisement
ಹಿಜಬ್ ಹಾಕಿಕೊಂಡು ಪರೀಕ್ಷೆಗೆ ಬಂದ ವಿದ್ಯಾರ್ಥಿನಿಯರ ಪ್ರವೇಶ ಪತ್ರ ಹಾಗೂ ವಿದ್ಯಾರ್ಥಿನಿಯರನ್ನು ತಪಾಸಣೆ ಮಾಡುವ ಕಾರಣ ವಸ್ತ್ರ ತೆಗೆಯಿರಿ ಎಂದು ಬ್ರೀಮ್ಸ್ ಶಿಕ್ಷಕರು ಹೇಳಿದ್ದಾರೆ. ಆದರೆ ಇದನ್ನು ವಿದ್ಯಾರ್ಥಿಗಳು ನಿರಾಕರಿಸಿದ ಕಾರಣ ಪ್ರವೇಶ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕೇಸರಿ ಶಾಲು, ಹಿಜಬ್ ಧರಿಸುವಂತಿಲ್ಲ : ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಏನಿದೆ?
Advertisement
ಈ ಘಟನೆ ಮೂರು ದಿನಗಳ ಹಿಂದೆ ಬ್ರೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದ್ದು, ಇದೀಗ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಸಂಭಾಷಣೆಯ ವೀಡಿಯೋ ವೈರಲ್ ಆಗುತ್ತಿದೆ.