ಶಿವಮೊಗ್ಗ: ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ಅನುಮತಿ ಕೊಡಲಿಲ್ಲ ಎನ್ನುವ ಕಾರಣಕ್ಕೆ ವಿದ್ಯಾರ್ಥಿ (Student) ಹಾಗೂ ಆತನ ಪೋಷಕರು ಕಾಲೇಜಿನಲ್ಲಿಯೇ ಉಪನ್ಯಾಸಕರೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಸಾಗರದ (Sagar) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ (College) ನಡೆದಿದೆ.
ಹಲ್ಲೆಗೊಳಗಾದ ಉಪನ್ಯಾಸಕರನ್ನು ಪ್ರೊ.ರಾಜು ಎಂದು ಗುರುತಿಸಲಾಗಿದೆ. ಇನ್ನೂ ರಾಜು ಅವರೇ ಮೊದಲು ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿಯ ಪೋಷಕ ವಿಜಯ್‍ಕುಮಾರ್ ಆರೋಪಿಸಿದ್ದಾರೆ.
ಘಟನೆ ಕುರಿತು ಸಾಗರ ಪಟ್ಟಣ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ. ಹಲ್ಲೆಗೊಳಗಾದ ಉಪನ್ಯಾಸಕರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.