ಚಿಕ್ಕಮಗಳೂರು: ಶಾಲೆಯಲ್ಲಿ ಮಕ್ಕಳಿಗೆ ನೀಡಿದ್ದ ಬಿಸಿಯೂಟದ ಪುಳಿಯೊಗರೆ ತಿಂದು, ಹಾಲು ಕುಡಿದ 17 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಶಿರವಾಸೆಯಲ್ಲಿ ನಡೆದಿದೆ.
ಶಿರವಾಸೆ ಗ್ರಾಮದಲ್ಲಿರುವ ವಿವೇಕಾನಂದ ಶಾಲೆಯಲ್ಲಿ ಮಧ್ಯಾಹ್ನ ಊಟದ ಬಳಿಕ ಮಕ್ಕಳಿಗೆ ಹಾಲನ್ನು ನೀಡಲಾಗಿತ್ತು. ಮಕ್ಕಳು ಊಟ ಮಾಡಿ ಹಾಲು ಕುಡಿಯುತ್ತಿದ್ದಂತೆ ತಲೆಸುತ್ತು, ವಾಂತಿ ಹಾಗೂ ಹೊಟ್ಟೆ ನೋವಿನಿಂದ ಬಳಲಿದ್ದಾರೆ. ಕೂಡಲೇ ಎಚ್ಚೆತ್ತ ಶಿಕ್ಷಕರು ಮಕ್ಕಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಬಳಿಕ ಅಲ್ಲಿಂದ ಎಲ್ಲಾ ಮಕ್ಕಳನ್ನ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
Advertisement
ಜಿಲ್ಲಾಸ್ಪತ್ರೆಯಲ್ಲಿ ಎಲ್ಲಾ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದ್ದು, ಯಾವುದೇ ಆಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ತಹಶೀಲ್ದಾರ್ ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಮಾಧ್ಯಹ್ನದ ಊಟಕ್ಕೆ ತಯಾರು ಮಾಡಲಾಗಿದ್ದ ಪುಳಿಯೊಗರೆ ಹಾಗೂ ಹಾಲನ್ನು ಪರೀಕ್ಷೆಗೆಂದು ಲ್ಯಾಬ್‍ಗೆ ಕಳಿಸಿದ್ದಾರೆ.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv