ಬೆಳಗಾವಿ: ವಿದ್ಯಾರ್ಥಿಗಳಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ, ಭೀತಿ ಮೂಡದಂತೆ ಶಾಲಾ, ಕಾಲೇಜುಗಳು ಪ್ರಾರಂಭ ಮಾಡುವುದು ಸರ್ಕಾರದ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಕೇಸ್ ಕೋರ್ಟ್‍ನಲ್ಲಿದೆ. ಪ್ರತಿದಿನವೂ ವಿಚಾರ ನಡೆಯುತ್ತಿದೆ. ಈಗಾಗಲೇ ಕೋರ್ಟ್ ಮಧ್ಯಂತರ ಆದೇಶವನ್ನು ಕೊಟ್ಟಿದೆ. ಹೀಗಾಗಿ ನಮ್ಮ ಮೊದಲ ಆದ್ಯತೆ ರಾಜ್ಯದಲ್ಲಿ ಶಾಂತಿ ನೆಲೆಸಬೇಕು. ವಿದ್ಯಾರ್ಥಿಗಳಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ, ಭೀತಿ ಮೂಡದಂತೆ ಶಾಲಾ ಕಾಲೇಜುಗಳು ಪ್ರಾರಂಭ ಮಾಡುವುದು ಸರ್ಕಾರದ ಮೊದಲ ಆದ್ಯತೆ ಎಂದರು. ಇದನ್ನೂ ಓದಿ: 6 ವರ್ಷಗಳ ಕಾಲ ಕುತ್ತಿಗೆಯಲ್ಲಿ ಟೈರ್ ಸಿಕ್ಕಿಸಿಕೊಂಡಿದ್ದ ಮೊಸಳೆಗೆ ಕೊನೆಗೂ ಸಿಕ್ತು ಮುಕ್ತಿ!
Advertisement
Advertisement
ಬಜೆಟ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಜೆಟ್ ಪ್ರಕ್ರಿಯೆ ಪ್ರಾರಂಭವಾಗಿದೆ. ಈಗಾಗಲೇ ಹಲವಾರು ಇಲಾಖೆಗಳೊಂದಿಗೆ ಸಭೆಯನ್ನು ನಡೆಸಿದ್ದೇನೆ. ಮತ್ತೆ ಸೋಮವಾರ ಮತ್ತು ಮಂಗಳವಾರ ಹಲವು ಇಲಾಖೆಗಳ ಸಭೆಯನ್ನು ಮಾಡಜುತ್ತೇನೆ. ಇವೆಲ್ಲ ಮುಗಿದ ನಂಯರ 25ರ ನಂತರ ಎಲ್ಲ ಇಲಾಖೆಗಳ ಬೇಡಿಕೆಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಬಜೆಟ್ ಮಂಡನೆ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕುಂದಾನಗರಿ ಬೆಳಗಾವಿಯಲ್ಲಿ ಮತ್ತೆ ಆ್ಯಕ್ಟಿವ್ ಆಯ್ತಾ ಇರಾನಿ ಗ್ಯಾಂಗ್?