– ಹಿಜಬ್ ನಮ್ಮ ಸಂವಿಧಾನಾತ್ಮಕ ಹಕ್ಕು
ಉಡುಪಿ: ಆನ್‍ಲೈನ್ ಕ್ಲಾಸ್ ಮೂಲಕ ಮತ್ತೆ ವಿದ್ಯಾರ್ಥಿಗಳ ಜೊತೆ ನಮ್ಮನ್ನು ತಾರತಮ್ಯ ಮಾಡಬೇಡಿ. ನಾವು ಆನ್‍ಲೈನ್ ಕ್ಲಾಸ್ ಅಟೆಂಡ್ ಆಗುವುದಿಲ್ಲ ಎಂದು ಹಿಜಬ್ ಬಗ್ಗೆ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿರುವ ಉಡುಪಿಯ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರು ಹೇಳಿದ್ದಾರೆ.
Advertisement
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ವಿದ್ಯಾರ್ಥಿನಿಯರು, ಹಿಜಬ್ ನಮ್ಮ ಸಂವಿಧಾನಾತ್ಮಕ ಹಕ್ಕು. ನಾವು ಹಿಜಬ್ ಹಾಕಿಯೇ ಕಾಲೇಜಿಗೆ ಹೋಗುತ್ತೇವೆ. ಸರ್ಕಾರಿ ಕಾಲೇಜಿನಲ್ಲಿ ನಮಗೆ ನಮ್ಮ ಹಕ್ಕು ಸಿಗದಿದ್ದರೆ ನಾವು ಬೇರೆಡೆ ಅದನ್ನು ನಿರೀಕ್ಷಿಸಲು ಸಾಧ್ಯವೇ?. ಸೈನ್ಸ್ ವಿದ್ಯಾರ್ಥಿಗಳು ಇರೋದ್ರಿಂದ ನಮಗೆ ಆನ್‍ಲೈನ್ ಕ್ಲಾಸ್‍ನಲ್ಲಿ ಲ್ಯಾಬ್ ಅಟೆಂಡ್ ಮಾಡಲು ಆಗುವುದಿಲ್ಲ. ಇದನ್ನೂ ಓದಿ: ಉಡುಪಿ ಹಿಜಬ್ ವಿವಾದ – NSUI ಭೇಟಿ ನಿರಾಕರಿಸಿದ ಕಾಲೇಜು ಆಡಳಿತ ಮಂಡಳಿ
Advertisement
1 ತಿಂಗಳ ತರಗತಿ ನಷ್ಟ ಆಗಿದೆ:
ನಮಗೆ ಯಾವುದೇ ಆನ್‍ಲೈನ್ ಕ್ಲಾಸ್‍ಗಳು ಬೇಡ ಎಂದು ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಹಿಜಬ್ ಹೋರಾಟದ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಹೇಳಿದ್ದಾರೆ. ಕಾಲೇಜಿನ ಉಳಿದ ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಬ್ ಧರಿಸಲು ಸಿದ್ಧರಿದ್ದಾರೆ. ನಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯದಿಂದ ಅವರು ಭಯ ಗೊಂಡಿದ್ದಾರೆ. ಸರ್ಕಾರಿ ಕಾಲೇಜ್ ಆಗಿರುವುದರಿಂದ ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ. ತಾರತಮ್ಯವನ್ನು ಮಾಡಬೇಡಿ. ನಮಗೆ ನಡೆಯುತ್ತಿರುವ ದೌರ್ಜನ್ಯ ಪ್ರತಿದಿನ ಮಾಧ್ಯಮಗಳಲ್ಲಿ ನಮ್ಮ ಸುದ್ದಿಗಳನ್ನು ನೋಡಿ ಇತರ ಮುಸ್ಲಿಂ ವಿದ್ಯಾರ್ಥಿನಿಯರು ಆತಂಕಗೊಂಡಿದ್ದಾರೆ ಅವರು ನೈತಿಕವಾಗಿ ನಮಗೆ ಬೆಂಬಲ ಸೂಚಿಸಿದ್ದಾರೆ ಆದರೆ ಯಾರೂ ಮುಂದೆ ಬರುತ್ತಿಲ್ಲ ಎಂದು ವಿದ್ಯಾರ್ಥಿನಿ ಮುಸ್ಕಾನ್ ಜೈನಬ್ ಹೇಳಿದರು.
Advertisement
Advertisement
ಕಾಲೇಜಿನ ಇತರೆ ವಿದ್ಯಾರ್ಥಿನಿಯರು ಶಿಕ್ಷಣ ತುಂಬಾ ಮುಖ್ಯ ಎಂದು ನಮ್ಮ ಜೊತೆ ಪ್ರತಿಭಟನೆಗೆ ಬರುತ್ತಿಲ್ಲ. ಪ್ರತಿಭಟಿಸದೆ ಕ್ಲಾಸಿಗೆ ಹೋಗುತ್ತಿದ್ದಾರೆ. ನಮಗೂ ಶಿಕ್ಷಣ ಮುಖ್ಯ ಅದರ ಜೊತೆಗೆ ಧರ್ಮ, ಹಿಜಬ್ ಹಕ್ಕು ಮುಖ್ಯ. ಹಿಜಬ್ ಇಲ್ಲದೆ ತರಗತಿಯಲ್ಲಿ ಕುಳಿತುಕೊಳ್ಳಲು ನಮಗೆ ಕಂಫರ್ಟ್ ಆಗುವುದಿಲ್ಲ. ಕಾಲೇಜಿನ ಸಮವಸ್ತ್ರದ ಶಾಲ್‍ನಲ್ಲೇ ನಾವು ಹಿಜಬ್ ತಯಾರಿಸಿ ಅದನ್ನು ತೊಟ್ಟುಕೊಂಡು ಕ್ಲಾಸಿನಲ್ಲಿ ಕುಳಿತುಕೊಳ್ಳುತ್ತೇವೆ. ನಾವು ಬೇರೆ ಯಾವುದೇ ವಿಚಾರಕ್ಕೆ ಹಠಹಿಡಿದು ಕುಳಿತುಕೊಂಡಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಇಂದು ಹಿಜಬ್, ನಾಳೆ ಷರಿಯತ್ ಕಾನೂನು – ಉಡುಪಿ ಹಿಂದೂ ಜಾಗರಣಾ ವೇದಿಕೆ ಗರಂ
ಕಾಲೇಜಿನಲ್ಲಿ ಹಿಂದಿನಿಂದಲೂ ಪರಂಪರೆಯಿದೆ ಹಿಜಬ್‍ಗೆ ಅವಕಾಶ ಇಲ್ಲ ಎಂದು ಎಲ್ಲರೂ ಹೇಳುತ್ತಿದ್ದಾರೆ. ಆದರೆ ನಮ್ಮ ಸೀನಿಯರ್ಸ್‍ಗಳು ಧರಿಸುತ್ತಿದ್ದದ್ದನ್ನು ನಾವು ನೋಡಿದ್ದೇವೆ. ನಮ್ಮ ಶಿಕ್ಷಣದ ಬಗ್ಗೆ ಯಾರಿಗೂ ಯಾವುದೇ ಒಲವು ಇಲ್ಲ. ನಾವು ಉತ್ತಮವಾದ ಶಿಕ್ಷಣ ಪಡೆದು ಮುಂದೆ ಏನಾದರೂ ಜೀವನದಲ್ಲಿ ಸಾಧಿಸಬೇಕೆಂದು ಇದ್ದೇವೆ. ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಹಿಜಬ್‌ಗಾಗಿ ಮುಂದುವರಿದ ಹೋರಾಟ