ತುಮಕೂರು: ಪ್ಲಾಸ್ಟಿಕ್ ಉಪಯೋಗಿಸುವುದರಿಂದ ಆಗುವ ಅನಾಹುತಗಳ ಬಗ್ಗೆ ಪುಟಾಣಿಗಳು ತಮ್ಮ ಶಾಲಾ ವಾರ್ಷಿಕೋತ್ಸವದಲ್ಲಿ ಪುಟ್ಟಪುಟ್ಟ ಹೆಜ್ಜೆ ಹಾಕಿದ್ದಾರೆ. ಹೆಜ್ಜೆ ಹಾಕುವ ಮೂಲಕ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.
ತುಮಕೂರು ನಗರದ ಎಸ್‍ಎಸ್ ಪುರಂನಲ್ಲಿರುವ ಮಾರುತಿ ವಿದ್ಯಾಕೇಂದ್ರದ ಒಂದನೇ ತರಗತಿ ವಿದ್ಯಾರ್ಥಿಗಳು ನೃತ್ಯದ ಮೂಲಕ ಪ್ಲಾಸ್ಟಿಕ್ ಬಳಕೆಯಿಂದಾಗುವ ತೊಂದರೆಯನ್ನು ತೆರೆದಿಟ್ಟಿದ್ದಾರೆ. ಪ್ಲಾಸ್ಟಿಕ್ ಕುರಿತಾದ ಟಿಕ್ ಟಿಕ್ ಟಿಕ್ ಟಿಕ್ ಎನ್ನುವ ಹಿಂದಿ ಹಾಡಿಗೆ ಪುಟಾಣಿಗಳು ಹೆಜ್ಜೆ ಹಾಕಿದ್ದಾರೆ.
Advertisement
Advertisement
ವೇದಿಕೆ ಮುಂದೆ ವಿದ್ಯಾರ್ಥಿಗಳು ಹೆಜ್ಜೆ ಹಾಕುತ್ತಿದ್ದರೆ, ಹಿಂಭಾಗದ ಪರದೆ ಮೇಲೆ ಪ್ಲಾಸ್ಟಿಕ್ ತ್ಯಾಜ್ಯದಿಂದಾಗುವ ಪರಿಣಾಮಗಳ ದೃಶ್ಯಾವಳಿಗಳು ಮೂಡುತ್ತಿದ್ದವು. ವಿಶೇಷ ಎಂದರೆ ಪ್ರಧಾನಿ ಮೋದಿ ಕಡಲ ಕಿನಾರೆಯಲ್ಲಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಶುಚಿಗೊಳಿಸುವ ದೃಶ್ಯಾವಳಿ ಕಂಡು ಬಂದಿತ್ತು. ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ಹಲವು ಪರಿಸರ ಮಾಲಿನ್ಯಗಳ ಬಗ್ಗೆ ಪುಟಾಣಿ ಕಂದಮ್ಮಗಳು ನೃತ್ಯದ ಮೂಲಕ ಜಾಗೃತಿ ಮೂಡಿಸಿದ್ದಾರೆ.
Advertisement
ಟಿಕ್ ಟಿಕ್ ಎನ್ನುತ್ತಾ ಎಳೆಯರು ಹೆಜ್ಜೆ ಇಡುತಿದ್ದಂತೆ ನೆರೆದವರು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದರು. ಪರಿಸರ ಜಾಗೃತಿ ಮಕ್ಕಳ ನೃತ್ಯ ಮನೋಜ್ಞವಾಗಿ ಮೂಡಿ ಬಂದಿತ್ತು.