-ಅಡುಗೆ ಸಿಬ್ಬಂದಿ ವಜಾ, ಶಿಕ್ಷಕರಿಗೆ ನೋಟಿಸ್
ರಾಯಚೂರು: ಮಧ್ಯಾಹ್ನದ ಬಿಸಿಯೂಟದಲ್ಲಿ (Lunch) ಹಲ್ಲಿ (Lizard) ಪತ್ತೆಯಾಗಿದ್ದು, ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ರಾಯಚೂರು (Raichur) ತಾಲೂಕಿನ ಅಪ್ಪನದೊಡ್ಡಿ (Appanadoddi) ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
Advertisement
50 ಜನ ಮಕ್ಕಳಲ್ಲಿ ಮೂರು ಜನ ಮಕ್ಕಳು ತೀವ್ರ ಅಸ್ವಸ್ಥರಾಗಿದ್ದಾರೆ. ಮಧ್ಯಾಹ್ನ ಬಿಸಿಯೂಟಕ್ಕೆ ಉಪ್ಪಿಟ್ಟು ಮಾಡಲಾಗಿತ್ತು. ಊಟ ಸೇವಿಸಿದ ಬಳಿಕ ಮಕ್ಕಳು ಅಸ್ವಸ್ಥರಾಗಿದ್ದು, ಅಡುಗೆ ಪಾತ್ರೆಯ ತಳದಲ್ಲಿ ಹಲ್ಲಿ ಪತ್ತೆಯಾಗಿದೆ. ವಾಂತಿ, ಭೇದಿ, ತಲೆನೋವು ಕಾಣಿಸಿಕೊಂಡು ಅಸ್ವಸ್ಥರಾದ ಮಕ್ಕಳನ್ನು ಯಾಪಲದಿನ್ನಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ರಾಯಚೂರಿನ ರಿಮ್ಸ್ (RIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಭಾನುವಾರ, ಸೋಮವಾರ ನಂದಿಬೆಟ್ಟ ಸಂಪೂರ್ಣ ಬಂದ್
Advertisement
Advertisement
ಘಟನೆ ಹಿನ್ನೆಲೆ ಮೂರು ಜನ ಅಡುಗೆ ಸಿಬ್ಬಂದಿಯನ್ನು ಕೆಲಸದಿಂದ ವಜಾ (Dissmiss) ಮಾಡಲಾಗಿದೆ. ಶಾಲೆಯ ಮುಖ್ಯೋಪಾಧ್ಯಾಯರು ಸೇರಿ ಮೂರು ಜನ ಶಿಕ್ಷಕರಿಗೆ ನೋಟೀಸ್ ನೀಡಿ ತಾತ್ಕಾಲಿಕವಾಗಿ ಬೇರೆಡೆ ನಿಯೋಜನೆ ಮಾಡಲಾಗಿದೆ ಎಂದು ಡಿಡಿಪಿಐ ವೃಷಭೇಂದ್ರಯ್ಯ ತಿಳಿಸಿದ್ದಾರೆ. ಘಟನೆ ಹಿನ್ನೆಲೆ ಆಕ್ರೋಶಗೊಂಡಿದ್ದ ಗ್ರಾಮಸ್ಥರು ಶಾಲಾ ಆವರಣದಲ್ಲಿ ಜಮಾಯಿಸಿದ್ದರು. ಸದ್ಯ ಪರಿಸ್ಥಿತಿ ತಿಳಿಗೊಂಡಿದೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ, ಅದರ ಬುದ್ಧಿ ಎರಡೂ ಹ್ಯಾಕ್: ಪ್ರಲ್ಹಾದ್ ಜೋಶಿ
Advertisement
ಮುನ್ನೆಚ್ಚರಿಕೆಯಾಗಿ ಮಕ್ಕಳನ್ನು ಪೋಷಕರು ಆಸ್ಪತ್ರೆಗಳಿಗೆ ಕರೆತಂದು ಚಿಕಿತ್ಸೆ ಕೊಡಿಸಲು ಮುಂದಾಗಿದ್ದಾರೆ. ಶಾಲೆಗೆ ಯಾಪಲದಿನ್ನಿ ಠಾಣೆ ಪೊಲೀಸರು, ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಶಾಲೆಯಲ್ಲೇ ಮೆಡಿಕಲ್ ಕ್ಯಾಂಪ್ ಹಾಕಿದ್ದು, ವಿದ್ಯಾರ್ಥಿಗಳ ತಪಾಸಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅನ್ನಭಾಗ್ಯದಿಂದ ಹೊರಗುಳಿಯುತ್ತಾರಾ 6 ಲಕ್ಷ ಜನ?
Web Stories