ಮಂಗಳೂರು: ಹಿಜಬ್‍ಗೆ ಅವಕಾಶ ಇಲ್ಲದ ಕಾಲೇಜಿನಿಂದ ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿಯನ್ನು ಹಿಂಪಡೆದು ತಮ್ಮ ಹೋರಾಟವನ್ನು ಮುಂದುವರಿಸಿದ್ದಾರೆ.
ಕೆಲವು ತಿಂಗಳ ಹಿಂದಷ್ಟೇ ಪರೀಕ್ಷೆಗಳಿಗೆ ಹಿಜಬ್ ಧರಿಸಲು ಅವಕಾಶವಿಲ್ಲ ಎಂದಿದ್ದಕ್ಕೆ ಅನೇಕ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದರು. ಇದೀಗ ಹಿಜಬ್ ಸಮರ ಮತ್ತೆ ಮುಂದುವರಿದಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಶೇ.16 ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿಯನ್ನು ಹಿಂಪಡೆದಿದ್ದಾರೆ.
Advertisement
Advertisement
ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪಿ.ಎಸ್ ಯಡಪಡಿತ್ತಾಯ ಮಾತನಾಡಿ, ಟಿಸಿ ಪಡೆಯಬಹುದು ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದ 900 ವಿದ್ಯಾರ್ಥಿನಿಯರ ಪೈಕಿ 145 ಮಂದಿ ಟಿಸಿಯನ್ನು ಹಿಂಪಡೆದಿದ್ದಾರೆ. ಅದರಲ್ಲಿ ಸರ್ಕಾರಿ ಕಾಲೇಜಿನ 34%, ಅನುದಾನಿತ ಕಾಲೇಜಿನ 13% ವಿದ್ಯಾರ್ಥಿನಿಯರಿದ್ದಾರೆ. ಇದನ್ನೂ ಓದಿ: ಸಿಎಂ ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ – 13 ಮಂದಿ ಅರೆಸ್ಟ್
Advertisement
Advertisement
ಹಿಜಬ್ ಧರಿಸಲು ಅವಕಾಶ ಇಲ್ಲದ ಕಾರಣ ಮಂಗಳೂರಿನ ಹಿಜಬ್ ಹೋರಾಟಗಾರ್ತಿ ಗೌಸಿಯಾ ಕಾಲೇಜಿನಿಂದ ಟಿಸಿ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿ, ವಿದ್ಯಾರ್ಥಿನಿಯರು ಟಿಸಿ ಪಡೆಯಲು ಸಚಿವ ಬಿ.ಸಿ ನಾಗೇಶ್ ಅವರೇ ಮುಖ್ಯ ಕಾರಣರಾಗಿದ್ದಾರೆ. ಸಂವಿಧಾನ ನೀಡಿರುವ ಹಕ್ಕಿನ ಪ್ರಕಾರ ಶಿಕ್ಷಣ ಪಡೆಯಲು ನಾಗೇಶ್ ಬಿಡಲಿಲ್ಲ. ತುಂಡು ಬಟ್ಟೆಯನ್ನೇ ದೊಡ್ಡ ವಿವಾದವನ್ನಾಗಿ ನಾಗೇಶ್ ಮಾಡಿದ್ದಾರೆ. ಇದರಿಂದ ಸರ್ಕಾರಕ್ಕೆ ನಷ್ಟವಾಗಲಿದೆ. ಹಲವು ಸರ್ಕಾರಿ ಕಾಲೇಜುಗಳು ಮುಚ್ಚಲಿದೆ. ಇಡೀ ರಾಜ್ಯಾದ್ಯಂತ 30% ಅಧಿಕ ವಿದ್ಯಾರ್ಥಿನಿಯರು ಕಾಲೇಜು ಬಿಟ್ಟಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ದಿನೇಶ್ ಗುಂಡೂರಾವ್ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ದಾಳಿ