ಶಿವಮೊಗ್ಗ: ಹಿಜಬ್ – ಕೇಸರಿ(Hijab Kesari) ವಿವಾದ ತೀವ್ರಗೊಂಡಿದ್ದು ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜ್ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಕಲ್ಲುತೂರಾಟ ನಡೆದಿದೆ. ಬಸ್‌ಗಳ ಮೇಲೂ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಅಂಗಡಿಗಳನ್ನು ಬಂದ್ ಮಾಡುವಂತೆ ಪೊಲೀಸರು ಸೂಚನೆ ನೀಡಿದ್ದು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ.
ರಾಷ್ಟ್ರಧ್ವಜ ಹಾರಿಸುವ ಸ್ಥಳದಲ್ಲಿ ವಿದ್ಯಾರ್ಥಿಗಳು ಕೇಸರಿ ಧ್ವಜ ಹಾರಿಸಿದ್ದರೆ ಇನ್ನೊಂದು ಕಡೆಯಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್ ಮಾಡಿ ನಿಯಂತ್ರಿಸಿದ್ದಾರೆ. ಇದನ್ನೂ ಓದಿ: ಕೇಸರಿ ಪೇಟ, ಕೇಸರಿ ಶಾಲಿನೊಂದಿಗೆ ಕಾಲೇಜಿಗೆ ಬಂದ ಎಂಜಿಎಂ ವಿದ್ಯಾರ್ಥಿಗಳು!
Advertisement
Advertisement
ಆರಂಭದಲ್ಲಿ ಕಲ್ಲು ತೂರಾಟ ನಡೆಸಿದ ವಿದ್ಯಾರ್ಥಿಗಳನ್ನು ಬಂಧಿಸುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಕಲ್ಲು ತೂರಾಟ ನಡೆಸಿದ 6 ವಿದ್ಯಾರ್ಥಿಗಳನ್ನು ಠಾಣೆಗೆ ಕರೆದುಕೊಂಡು ಹೋಗುವ ವೇಳೆ ವಿದ್ಯಾರ್ಥಿಗಳ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಧರ್ಮವನ್ನು ಮನೆಗಳಲ್ಲಿ ಆಚರಿಸಿ, ಶಿಕ್ಷಣಕ್ಕೆ ತರಬೇಡಿ: ಸುರಯ್ಯ ಅಂಜುಮ್
Advertisement
ವಿದ್ಯಾರ್ಥಿಗಳನ್ನು ಪೊಲೀಸರು ಠಾಣೆಗೆ ಕರೆದೊಯ್ಯುವ ವೇಳೆ ರಸ್ತೆಯಲ್ಲಿ ಪೊಲೀಸ್ ವಾಹನಕ್ಕೆ ಸಮುದಾಯದ ಜನ ಅಡ್ಡಲಾಗಿ ಮಲಗಿದ್ದಾರೆ. ಈ ವೇಳೆ ಐವರು ವಿದ್ಯಾರ್ಥಿಗಳು ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ.
Advertisement
ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕೊಠಡಿಯಲ್ಲಿ ಕುಳ್ಳಿರಿಸಲಾಗಿತ್ತು. ಈ ವಿಚಾರ ತಿಳಿದು ವಿದ್ಯಾರ್ಥಿಗಳು ಕಾಲೇಜಿನ ಗೇಟಿಗೆ ಕಲ್ಲು ಹೊಡೆದಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತೆರಳುತ್ತಿದ್ದಂತೆ ಇಂದು ಮತ್ತು ನಾಳೆ ಕಾಲೇಜಿಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ರಜೆ ಘೋಷಿಸಿದ್ದಾರೆ.