ಯಾದಗಿರಿ: ಉಚಿತ ಲ್ಯಾಪ್‍ಟಾಪ್ ವಿತರಣೆಯಲ್ಲಿ ಯಾದಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರು ಮಲತಾಯಿ ಧೋರಣೆ ಅನುಸರಿಸಿದ್ದಾರೆ ಎಂದು ಆರೋಪಿಸಿ, ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಲ್ಲದೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಪ್ರಾಂಶುಪಾಲರು 2017-18 ನೇ ಸಾಲಿನಲ್ಲಿ ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಅಂದು ದಾಖಲಾದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ಮುಕ್ತಾಯ ಹಂತ ತಲುಪಿದರೂ ಕಾಲೇಜು ಆಡಳಿತ ಮಂಡಳಿ ಲ್ಯಾಪ್‍ಟಾಪ್ ನೀಡಿಲ್ಲ. ಆದರೆ 2019-20ಕ್ಕೆ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಈ ತಿಂಗಳು ಉಚಿತ ಲ್ಯಾಪ್‍ಟಾಪ್ ನೀಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಡಿಸಿದ್ದರು.
Advertisement
Advertisement
ಆಕ್ರೋಶಗೊಂಡ ವಿದ್ಯಾರ್ಥಿಗಳು ತರಗತಿಯನ್ನು ಬಹಿಷ್ಕರಿಸಿ ಗುರುವಾರ ಪ್ರತಿಭಟನೆ ನಡೆಸಿದರು. ಕಾಲೇಜು ಆವರಣದಿಂದ ಜಿಲ್ಲಾಡಳಿತ ಭವನದವರಿಗೆ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು. ಅಲ್ಲದೆ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು, ಆದರೆ ಪೊಲೀಸರು ವಿದ್ಯಾರ್ಥಿಗಳನ್ನು ತಡೆದರು. ನಂತರ ಕಚೇರಿ ಮುಖ್ಯ ದ್ವಾರದಲ್ಲಿಯೇ ಅಪರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ನಮ್ಮ ಕರವೇ ಸಂಘಟನೆಯ ಸದ್ಯಸರು ಸಾಥ್ ನೀಡಿದ್ದರು.