ನವದೆಹಲಿ: ಕೆಲವು ದಿನಗಳಿಂದ ಕರ್ನಾಟಕದಲ್ಲಿ ನಡೆಯುತ್ತಿರುವ ‘ಹಿಜಬ್’ ವಿವಾದ ನಡುವೆ, ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ಶಾಲೆಗಳು ಅಥವಾ ಆಡಳಿತ ಮಂಡಳಿಯು ಸೂಚಿಸುವ ಡ್ರೆಸ್ ಕೋಡ್ ಮಾತ್ರ ಅನುಸರಿಸಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳು ಶಾಲೆಗಳು ಅಥವಾ ಆಡಳಿತ ಮಂಡಳಿ ಸೂಚಿಸಿದ ಡ್ರೆಸ್ ಕೋಡ್ ಅನುಸರಿಸಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು. ಇನ್ನೂ ಈ ವಿಚಾರವಾಗಿ ವಿದ್ಯಾರ್ಥಿಗಳನ್ನು ಪ್ರಚೋದಿಸುತ್ತಿರುವವರು ಯಾರು ಎಂಬುದನ್ನು ಕಂಡು ಹಿಡಿಯಬೇಕು ಎಂದಿದ್ದಾರೆ. ಇದನ್ನೂ ಓದಿ: ಕೇಸರಿ ಪೇಟ, ಕೇಸರಿ ಶಾಲಿನೊಂದಿಗೆ ಕಾಲೇಜಿಗೆ ಬಂದ ಎಂಜಿಎಂ ವಿದ್ಯಾರ್ಥಿಗಳು!
Advertisement
Advertisement
ಫೆಬ್ರವರಿ 4 ರಂದು ಕರ್ನಾಟಕದ ಉಡುಪಿ ಜಿಲ್ಲೆಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಿಜಬ್ ಪ್ರತಿಭಟನೆ ಪ್ರಾರಂಭವಾಯಿತು. ಕೆಲವು ವಿದ್ಯಾರ್ಥಿಗಳು ಹಿಜಾಬ್ (ಮುಸ್ಲಿಂ ಮಹಿಳೆಯರು ಧರಿಸುವ ಸ್ಕಾರ್ಫ್) ಧರಿಸಿ ತರಗತಿಗಳಿಗೆ ಹಾಜರಾಗದಂತೆ ನಿರ್ಬಂಧಿಸಲಾಗಿದೆ ಎಂದು ಆರೋಪಿಸಿದ್ದರು. ನಂತರ ಸೋಮವಾರ ವಿಜಯಪುರದ ಶಾಂತೇಶ್ವರ ಶಿಕ್ಷಣ ಟ್ರಸ್ಟ್‌ಗೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಆಗಮಿಸಿದ್ದರು. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಇಂದು ಮೊದಲ ಹಂತದ ಮತದಾನ
Advertisement
All students must follow the dress code prescribed by the schools/administration. Law and order must be maintained in the State. We need to see who are these people instigating the students: Union minister Pralhad Joshi on Karnataka hijab row pic.twitter.com/NEBG1ljnRv
— ANI (@ANI) February 8, 2022
Advertisement
ಹೀಗಾಗಿ ವಿದ್ಯಾರ್ಥಿಗಳು ಶಾಲಾ ಆಡಳಿತ ಮಂಡಳಿ ಅನುಮೋದಿಸಿದ ಸಮವಸ್ತ್ರವನ್ನು ಮಾತ್ರ ಧರಿಸಬಹುದಾಗಿದ್ದು, ಕಾಲೇಜುಗಳಲ್ಲಿ ಇತರೆ ಧಾರ್ಮಿಕ ಆಚರಣೆಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿತು. ಇದರಿಂದ ಪ್ರತಿಭಟನೆಯ ಕಾವು ಹೆಚ್ಚಾದ್ದರಿಂದ ಉನ್ನತ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ಎಲ್ಲಾ ವಿಶ್ವವಿದ್ಯಾಲಯಗಳು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ (ಡಿಸಿಟಿಇ) ಅಡಿಯಲ್ಲಿರುವ ಕಾಲೇಜುಗಳಿಗೆ ಫೆಬ್ರವರಿ 9 ರಿಂದ 11 ರವರೆಗೆ ಮೂರು ದಿನಗಳ ರಜೆ ಘೋಷಿಸಲಾಗಿದೆ.