– ಅವೈಜ್ಞಾನಿಕ ಕಾಲೇಜು, ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಮಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಮಂಗಳೂರು ಹೊರವಲಯದ ಕೋಣಾಜೆಯ ಮಂಗಳೂರು ವಿಶ್ವವಿದ್ಯಾಲಯದ (Mangaluru University) ಆಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Advertisement
ಪರೀಕ್ಷಾ ಅಂಕಪಟ್ಟಿಯ ಸಮಸ್ಯೆ ಇದೆ. ಅವೈಜ್ಞಾನಿಕವಾಗಿ ಪರೀಕ್ಷಾ ಶುಲ್ಕಗಳ ಹೆಚ್ಚಳ ಮಾಡಲಾಗಿದೆ. ಹಾಸ್ಟೆಲ್ ಸಮಸ್ಯೆಗಳ ಪರಿಹಾರ ಆಗಬೇಕು ಎಂದು ವಿದ್ಯಾರ್ಥಿಗಳು ವಿವಿಧ ವಿಚಾರಗಳನ್ನು ಮುಂದಿಟ್ಟು ಪ್ರತಿಭಟಿಸಿದರು. ಇದನ್ನೂ ಓದಿ: 50 ಸಾವಿರ ಲಂಚ ಸ್ವೀಕಾರ – ಭಟ್ಕಳ ಪುರಸಭಾ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ
Advertisement
Advertisement
ಕಚೇರಿಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರು ಕಚೇರಿ ಮುಂಭಾಗದ ಗಾಜನ್ನು ಒಡೆದು ಪುಡಿಗೈದರು. ಈ ವೇಳೆ ಓರ್ವ ವಿದ್ಯಾರ್ಥಿಗೆ ಒಡೆದ ಗಾಜಿನಿಂದ ಸಣ್ಣಪುಟ್ಟ ಗಾಯಗಳಾಗಿದೆ. ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ವಿವಿ ಉಪಕುಲಪತಿಗಳು, ಸಿಂಡಿಕೇಟ್ ಸದಸ್ಯರ ಜೊತೆ ಸ್ಥಳಕ್ಕಾಗಮಿಸಿ ಮನವಿ ಸ್ವೀಕರಿಸಿ ಸಮಸ್ಯೆ ಪರಿಹಾರಕ್ಕೆ ಭರವಸೆ ನೀಡಿದರು.
Advertisement
ವಿದ್ಯಾರ್ಥಿಗಳು ಪ್ರತಿಭಟನೆಯ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡೋದು ಸರಿಯಲ್ಲ ಎಂದ ಉಪಕುಲಪತಿ ಪಿ.ಎಲ್ ಧರ್ಮ, ಆದಷ್ಟು ಬೇಗ ಸರ್ಕಾರದ ಗಮನಕ್ಕೆ ತರೋದಾಗಿ ಹೇಳಿದರು. ತಮ್ಮ ಬೇಡಿಕೆ ಶೀಘ್ರದಲ್ಲಿ ಈಡೇರದೇ ಇದ್ದರೆ ಎಲ್ಲಾ ಕಾಲೇಜಿನ ಮುಂದೆ ಉಗ್ರ ಹೋರಾಟ ನಡೆಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: Waqf Land Row | ವಿವಾದಿತ ಜಮೀನಿನಲ್ಲಿ ಉಳುಮೆ – ರೈತರ ಮೇಲೆ ಕೇಸ್ ದಾಖಲು, ಟ್ರ್ಯಾಕ್ಟರ್ ಜಪ್ತಿ