ದಾವಣಗೆರೆ: ಮಟಮಟ ಮಧ್ಯಾಹ್ನವೇ ವಿದ್ಯಾರ್ಥಿಗಳು ಲಿಪ್ ಲಾಕ್ ಮಾಡಿದ ದೃಶ್ಯ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಪಿಯುಸಿ ಓದುವ ವಿದ್ಯಾರ್ಥಿಗಳಿಬ್ಬರು ಯಾರ ಭಯವಿಲ್ಲದೆ ಲಿಪ್ ಲಾಕ್ ಮಾಡಿ ಚೆಲ್ಲಾಟವಾಡುತ್ತಿದ್ದಾರೆ. ಪೋಷಕರು ಮಕ್ಕಳನ್ನು ಕಾಲೇಜಿಗೆ ಕಳುಹಿಸಿ ಓದಿ ವಿದ್ಯಾವಂತರಾಗಬೇಕು ಎನ್ನುವ ಕನಸು ಕಾಣುತ್ತಿದ್ದರೆ, ಇತ್ತ ವಿದ್ಯಾರ್ಥಿಗಳು ಈ ರೀತಿಯ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಕಾಲೇಜಿಗೆ ಬಂದ ವಿದ್ಯಾರ್ಥಿಗಳು ಪಾರ್ಕಿನೊಳಗೆ ಮೋಜು ಮಸ್ತಿ
ವಿದ್ಯಾರ್ಥಿಗಳು ಕಾಲೇಜಿನ ಸಮವಸ್ತ್ರದಲ್ಲೇ ಕುಳಿತು ಲಿಪ್ ಲಾಕ್ ಮಾಡಿದ್ದಾರೆ. ಸದ್ಯ ವಿದ್ಯಾರ್ಥಿಗಳಿಬ್ಬರ ಲಿಪ್ ಲಾಕ್ ಮಾಡುವ ದೃಶ್ಯವನ್ನು ಸಾರ್ವಜನಿಕರು ತಮ್ಮ ಮೊಬೈಲಿನಲ್ಲಿ ಸೆರೆ ಹಿಡಿದಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ವಿಡಿಯೋ ನೋಡಿದ ಸಾರ್ವಜನಿಕರು ವಿದ್ಯಾರ್ಥಿಗಳ ವಿರುದ್ಧ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಇದನ್ನೆಲ್ಲ ತಡೆಗಟ್ಟಬೇಕಾದ ಪೊಲೀಸರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಈ ನಡುವೆ ದಾವಣಗೆರೆಯ ಹಲವು ಪಾರ್ಕ್ ಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿದೆ.