ಮಡಿಕೇರಿ: ಕೊಡಗಿನ ಸರ್ಕಾರಿ (Kodagu School) ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ನೀಡಿರುವ ಶೂ-ಸಾಕ್ಸ್ ಕಳಪೆ ಗುಣಮಟ್ಟದ್ದಾಗಿವೆ ಎಂಬ ಆರೋಪ ಕೇಳಿಬಂದಿದೆ.
ವಿದ್ಯಾರ್ಥಿಗಳಿಗೆ ವಿತರಿಸಿದ ಶೂಗಳು ಕೆಲವೇ ದಿನಗಳಲ್ಲಿ ಹಾಳಾಗುತ್ತಿವೆ ಎಂದು ಪೋಷಕರು ಆರೋಪಿಸಿದ್ದಾರೆ. ಮಕ್ಕಳಿಗೆ ನೀಡುವ ಸಾಮಗ್ರಿಗಳ ಗುಣಮಟ್ಟವನ್ನು ಸರಿಯಾಗಿ ಪರಿಶೀಲಿಸದೇ ವಿತರಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ, ಶಾಲೆಯ ಕೊಠಡಿಯಲ್ಲಿ ಇಡಲಾಗಿದ್ದ ಪುಸ್ತಕಗಳಿಗೂ ಗೆದ್ದಲು ಹಿಡಿದಿರುವುದು ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳಿಗೆ ಉಪಯೋಗವಾಗಬೇಕಿದ್ದ ಪುಸ್ತಕಗಳು ಈ ರೀತಿ ಹಾಳಾಗುತ್ತಿರುವ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ರಾಜಕೀಯವೆಂಬುದು ಸ್ವಾರ್ಥದ ಆಟವಾಗಿದೆ – ಮೋಹನ್ ಭಾಗವತ್ ಬೇಸರ
ಮಕ್ಕಳ ಶಿಕ್ಷಣಕ್ಕೆ ಬೇಕಾದ ಪುಸ್ತಕ, ಶೂ-ಸಾಕ್ಸ್‌ಗಳನ್ನೇ ಗುಣಮಟ್ಟವಿಲ್ಲದೆ ನೀಡಿದರೆ ಹೇಗೆ ಎಂದು ಪೋಷಕರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹಿಸಿದ್ದಾರೆ.ಇದನ್ನೂ ಓದಿ: KPSC ಹಗರಣ ಕೇಸಲ್ಲಿ CID ಮಾಸ್ಟರ್‌ಪ್ಲ್ಯಾನ್; CBIಗೆ ವಹಿಸುವಂತೆ ಹೈಕೋರ್ಟ್‌ಗೆ ಅರ್ಜಿ
