ಬೀದರ್: ಕೊರೊನಾ ಮೂರನೇ ಅಲೆಯ ಭೀತಿ ನಡುವೆ ಶಾಲಾ, ಕಾಲೇಜುಗಳು ಇಂದಿನಿಂದ ಪ್ರಾರಂಭವಾಗಿವೆ. ಗಡಿ ಜಿಲ್ಲೆ ಬೀದರ್ ನಲ್ಲಿ ವಿದ್ಯಾರ್ಥಿಗಳನ್ನು ಶಿಕ್ಷಕರು ಹೂ ಹಾಕಿ, ಚಪ್ಪಾಳೆ ತಟ್ಟುವ ಮೂಲಕ ಡಿಫರೆಂಟಾಗಿ ಸ್ವಾಗತ ಮಾಡಿದ್ದಾರೆ.
Advertisement
ಸರ್ಕಾರಿ ಶಾಲಾ – ಕಾಲೇಜುಗಳಲ್ಲಿ ಇಂದು ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳು ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಖುಷಿಯಿಂದ ಶಾಲಾ, ಕಾಲೇಜುಗಳ ಕಡೆ ಮುಖ ಮಾಡಿದ್ದಾರೆ. ಅಲ್ಲದೇ ಕೋವಿಡ್‍ನ ಯಾವುದೇ ಭಯವಿಲ್ಲದೆ ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ಬರುತ್ತಿದ್ದಾರೆ. ಇದನ್ನೂ ಓದಿ:ಶ್ರೀಗುರು ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ
Advertisement
Advertisement
ಶಾಲೆ ಪ್ರಾರಂಭವಾಗಿದ್ದು ಹಾಗೂ ಇದರ ಜೊತೆಗೆ ನಮ್ಮ ಶಿಕ್ಷಕರು ಈ ರೀತಿ ಡಿಫರೆಂಟಾಗಿ ಸ್ವಾಗತ ಮಾಡಿಕೊಂಡಿದ್ದು, ನಮಗೆ ಖುಷಿಯಾಗಿದೆ ಎಂದು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಶಿಕ್ಷಕರು ಕೂಡ ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಶಾಲೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಅಕ್ರಮ ಸಾಗಾಟದ ವೇಳೆ ಅಪಘಾತವಾಗಿ 20 ಕರುಗಳ ಸಾವು ಪ್ರಕರಣ – 10 ಮಂದಿಯ ಬಂಧನ
Advertisement