ಗದಗ: ಮಹಾಶಿವರಾತ್ರಿ ಅಂಗವಾಗಿ ದೇವರ ದರ್ಶನಕ್ಕೆಂದು ಬಂದ ವಿದ್ಯಾರ್ಥಿಗಳು, ನದಿ ಸ್ನಾನದ ವೇಳೆ ಈಜು ಬಾರದೆ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಈ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರ ಬಳಿ ತುಂಗಭದ್ರಾ ನದಿನಲ್ಲಿ ನಡೆದಿದೆ.
ಅಖಿಲೇಶ್ ಹಾಗೂ ಶರಣಗೌಡ ಮೃತರಾಗಿದ್ದಾರೆ. ಸುಕ್ಷೇತ್ರ ಶಿಂಗಟಾಲೂರ ವೀರಭದ್ರೇಶ್ವರ ದೇವಸ್ಥಾನಕ್ಕೆ ಇಬ್ಬರು ವಿದ್ಯಾರ್ಥಿಗಳು ಬೆಳಿಗ್ಗೆ ಬಂದಿದ್ದರು. ದೇವರ ದರ್ಶನಕ್ಕೂ ಮೊದಲು ನದಿ ಸ್ನಾನಕ್ಕೆ ತೆರಳಿದ್ದರು. ಈಜು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಪುರುಷನ ವೇಷಧರಿಸಿ ಕಳ್ಳತನ ಮಾಡಲು ಬಂದ ಯುವತಿ ಅರೆಸ್ಟ್!
Advertisement
Advertisement
ಮೃತರು 9ನೇ ತರಗತಿಯ ವಿದ್ಯಾರ್ಥಿಗಳಾಗಿದ್ದಾರೆ. ಇವರು ವಿಜಯನಗರ ಜಿಲ್ಲೆ ಹಗರಿ ಬೊಮ್ಮನಹಳ್ಳಿ ರಾಷ್ಟ್ರೋತ್ಥಾನ ವಿದ್ಯಾನಿಲಯದ ವಸತಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ ಸಾಯಂಕಾಲ ಹಬ್ಬಕ್ಕೆ ಊರಿಗೆ ಹೋಗುವುದಾಗಿ ಹಾಸ್ಟೆಲ್ ವಾರ್ಡನ್‍ಗೆ ಹೇಳಿ ಬಂದಿದ್ದಾರೆ. ಇಂದು ಶಿಂಗಟಾಲೂರ ವೀರಭದ್ರೇಶ್ವರ ದೇವಸ್ಥಾನ ಬಳಿ ತುಂಗಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ತೆಲುಗು ಸೂಪರ್ ಸ್ಟಾರ್ ಬಾಲಯ್ಯ ಜತೆ ನಟಿಸಲ್ಲ ಅಂದ ಕನ್ನಡತಿ
Advertisement
Advertisement
ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಈಜು ತಜ್ಞರಿಂದ ಮೃತದೇಹ ಹೊರ ತೆಗೆಯಲಾಯಿತು. ಈ ಕುರಿತು ಗದಗ ಜಿಲ್ಲೆ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: CBI ಎಂದು ಸುಳ್ಳು ಹೇಳಿ ಲಕ್ಷಾಂತರ ರೂ. ಹಣ, ಕೆಜಿಗಟ್ಟಲೆ ಚಿನ್ನದೋಚಿದರು!