ಬೆಳಗಾವಿ: ಚಾರಣಕ್ಕೆಂದು (Trekking) ಹೋಗಿ ಕಾಡಿನಲ್ಲಿ ಕಣ್ಮರೆಯಾಗಿದ್ದ ಬೆಳಗಾವಿ (Belagavi) ಕಾಲೇಜುವೊಂದರ 9 ವಿದ್ಯಾರ್ಥಿಗಳನ್ನು (Students) ಕರ್ನಾಟಕ ಹಾಗೂ ಗೋವಾ ಅರಣ್ಯ ಇಲಾಖೆ (Forest Department) ಸಿಬ್ಬಂದಿ ಜಂಟಿ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಿದ್ದಾರೆ.
ಕಣ್ಮರೆಯಾಗಿದ್ದ 9 ವಿದ್ಯಾರ್ಥಿಗಳು ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ಜಲ್ವಾಣಿ ಫಾಲ್ಸ್ (Jalwani Falls) ನೋಡುವ ಸಲುವಾಗಿ ಕಣಕುಂಬಿ ಅರಣ್ಯ ಪ್ರದೇಶದ ಮೂಲಕ ತೆರಳಿದ್ದರು. ಈ ಯುವಕರು ಪಾರವಾಡ ಗ್ರಾಮದಿಂದ ಮೂರು ಕಿಲೋಮೀಟರ್ ಬೈಕ್‌ನಲ್ಲಿ ತೆರಳಿದ್ದು, ಬಳಿಕ ಕಾಲು ದಾರಿಯಲ್ಲೇ ಜಲ್ವಾಣಿ ಫಾಲ್ಸ್‌ಗೆ ತೆರಳಿ ಎಂಜಾಯ್ ಮಾಡಿದ್ದರು. ಶುಕ್ರವಾರ ಸಂಜೆ ಮರಳಿ ಬರುವ ವೇಳೆ ದಾರಿ ತಿಳಿಯದೇ ಯುವಕರು ದಟ್ಟ ಕಾಡಿನಲ್ಲಿ ಕಣ್ಮರೆಯಾಗಿದ್ದಾರೆ. ತಕ್ಷಣವೇ ಯುವಕರು ಸ್ನೇಹಿತರಿಗೆ ಫೋನ್ ಮಾಡಿ ಕಾಡಿನಲ್ಲಿ ಕಣ್ಮರೆಯಾಗಿರುವ ಕುರಿತು ಮಾಹಿತಿ ರವಾನಿಸಿದ್ದಾರೆ. ಇದನ್ನೂ ಓದಿ: ನಿದ್ದೆ ಮಂಪರಿನಲ್ಲಿ ಟೀ ಅಂಗಡಿಗೆ ಟ್ರಕ್ ನುಗ್ಗಿಸಿದ ಚಾಲಕ- ಐವರ ದುರ್ಮರಣ
Advertisement
Advertisement
ಇದಾದ ಬಳಿಕ ರಾತ್ರಿಯಿಡೀ ಕರ್ನಾಟಕ ಹಾಗೂ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ 30 ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ವಿದ್ಯಾರ್ಥಿಗಳನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಕಾಡಿನಿಂದ ಹೊರಗೆ ಕರೆದುಕೊಂಡು ಬಂದಿದ್ದಾರೆ. ಖಾನಾಪುರ ಎಸಿಎಫ್ ಸಂತೋಷ ಚೌಹಾಣ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಇದನ್ನೂ ಓದಿ: ಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಬಿದ್ದು ಟೆಕ್ಕಿ ದುರ್ಮರಣ
Advertisement
Advertisement
ಕಣಕುಂಬಿ ಆರ್‌ಎಫ್‌ಒ ಶಿವಕುಮಾರ್, ಭೀಮಗಡ ಆರ್‌ಎಫ್‌ಒ ರಾಕೇಶ್, ಖಾನಾಪುರ ಆರ್‌ಎಫ್‌ಓ ನಾಗರಾಜ್, ಡಿಆರ್‌ಎಫ್‌ಒ ವಿನಾಯಕ್ ಪಾಟೀಲ್, ಗೋವಾದ ಮಹಾದಾಯಿ ವೈಲ್ಡ್ ಲೈಫ್ ಡಿಎಫ್‌ಒ ಆನಂದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಇನ್ನು ಅಕ್ರಮ ಅರಣ್ಯ ಪ್ರದೇಶ ಪ್ರವೇಶ ಆರೋಪದಡಿ ಗೋವಾ ಅರಣ್ಯ ಇಲಾಖೆಯಿಂದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಲಾಗಿದೆ. ಇದನ್ನೂ ಓದಿ: 5 ಅಸ್ಥಿಪಂಜರ ಪತ್ತೆ ಪ್ರಕರಣ- ತಮ್ಮ ತಮ್ಮ ಮನೆಗಳಿಗೆ ಬೀಗ ಹಾಕಿ ತೆರಳಿದ ಅಕ್ಕಪಕ್ಕದ ನಿವಾಸಿಗಳು