ರಾಯಚೂರು: ಗುಲ್ಬರ್ಗಾ ವಿವಿಯಲ್ಲಿ ಪರೀಕ್ಷಾ ಅಕ್ರಮಗಳು ರಾಜಾರೋಷವಾಗಿ ನಡೆಯುತ್ತಿದ್ದು, ಇದೀಗ ಬಾಡಿಗೆ ಮನೆಯೊಂದರಲ್ಲೇ ಕುಳಿತು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಮೇ 8 ರಿಂದ ಪದವಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷಾ ಕೇಂದ್ರಕ್ಕೆ ತೆರಳದೇ ಮನೆಯಲ್ಲೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಕೇಂದ್ರದ ಸಿಬ್ಬಂದಿಯೇ ಈ ದಂಧೆಗೆ ಸಾಥ್ ನೀಡಿದ್ದಾರೆ.
Advertisement
Advertisement
ನಗರದ ಐಡಿಎಸ್ ಎಂಟಿ ಬಡಾವಣೆಯ ಬಾಡಿಗೆ ಮನೆಯಲ್ಲಿ ಬರೆಯುತ್ತಿರುವ ಮಾಹಿತಿ ಆಧಾರದ ಮೇಲೆ ಪರೀಕ್ಷಾ ಜಾಗೃತ ದಳದ ಅಧಿಕಾರಿಗಳು ದಾಳಿ ಮಾಡಿ ಅಕ್ರಮ ಬಯಲಿಗೆಳೆದಿದ್ದಾರೆ. ಸದರ ಬಜಾರ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.
Advertisement
ಇಂದು ಬಿಕಾಂ ಎರಡನೇ ಸೆಮಿಸ್ಟರ್ ಅರ್ಥಶಾಸ್ತ್ರ ಹಾಗೂ ಇಂಗ್ಲೀಷ್ ವಿಷಯ ಪರೀಕ್ಷೆ ನಡೆಯುತ್ತಿದ್ದು, ವಿವಿಧ ಕಾಲೇಜಿನ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ವೇಳೆ ಸಿಕ್ಕಿಬಿದ್ದಿದ್ದಾರೆ. ವಿವೇಕಾನಂದ ಬಿಎಡ್ ಕಾಲೇಜಿನ ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳೇ ಹೆಚ್ಚಾಗಿ ಇಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.
Advertisement
ಯಾವುದೋ ಕಾಲೇಜಿನಲ್ಲಿ ಬರೆಯಬೇಕಾಗಿದ್ದ ವಿದ್ಯಾರ್ಥಿಗಳು ಇಲ್ಲಿ ಬರೆಯುತ್ತಿದ್ದಾರೆ. ಖಚಿತ ಮಾಹಿತಿ ಆಧಾರದ ಮೇಲೆ ಬಂದು ದಾಳಿ ಮಾಡಿದ್ದೇವೆ. ಆದರೆ ಈ ರೀತಿಯಾಗಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟವರು ಯಾರು ಎಂದು ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ಮಾಡುತ್ತೇವೆ. ಸದ್ಯಕ್ಕೆ ಅವರ ಉತ್ತರ ಪತ್ರಿಕೆ, ಹಾಲ್ ಟಿಕೆಟ್ ಎಲ್ಲವನ್ನು ವಶಪಡಿಸಿಕೊಂಡಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.