ನವದೆಹಲಿ: ಮಧ್ಯಪ್ರದೇಶಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಸಂಪೂರ್ಣ ಅಧ್ಯಯನ ಮಾಡುವಂತೆ ಕಾನೂನು ಇಲಾಖೆಗೆ ಹಾಗೂ ಅಡ್ವೊಕೇಟ್ ಜನರಲ್ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Advertisement
ನವದೆಹಲಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶ ಪ್ರತಿ ನಮಗೆ ಬಂದಿಲ್ಲ. ಚುನಾವಣಾ ಆಯೋಗ ಏನು ತೀರ್ಮಾನ ಹೇಳುತ್ತದೆ ಅದನ್ನು ಪಾಲಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಶೀಘ್ರವೇ ಬಿಬಿಎಂಪಿ ಚುನಾವಣೆ: ಸುಪ್ರೀಂನಿಂದ ಮಹತ್ವದ ತೀರ್ಪು
Advertisement
ಸುಪ್ರೀಂ ಕೋರ್ಟ್ ಆದೇಶ ಎಲ್ಲಾ ರಾಜ್ಯಗಳಿಗೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಅನ್ವಯವಾಗುತ್ತದೆ. ಚುನಾವಣಾ ಆಯೋಗದೊಂದಿಗೆ ಚರ್ಚಿಸಿ ಅವರು ಸೂಚಿಸಿದಂತೆ ಕ್ರಮ ವಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿಂದು 129 ಮಂದಿಗೆ ಕೊರೊನಾ ಸೋಂಕು – 128 ಮಂದಿ ಗುಣಮುಖ