Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇದು ಅವಿವೇಕತನ, ಹೊಣೆಗೇಡಿತನದ ಸರ್ಕಾರ – ವಿಜಯೇಂದ್ರ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಇದು ಅವಿವೇಕತನ, ಹೊಣೆಗೇಡಿತನದ ಸರ್ಕಾರ – ವಿಜಯೇಂದ್ರ ವಾಗ್ದಾಳಿ

Dakshina Kannada

ಇದು ಅವಿವೇಕತನ, ಹೊಣೆಗೇಡಿತನದ ಸರ್ಕಾರ – ವಿಜಯೇಂದ್ರ ವಾಗ್ದಾಳಿ

Public TV
Last updated: November 22, 2023 2:39 pm
Public TV
Share
3 Min Read
BY Vijayendra 1 1
SHARE
ಮಂಗಳೂರು:  ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ರಾಜ್ಯದ ಕಾಂಗ್ರೆಸ್ ಸರ್ಕಾರ (Congress Government) ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ನಿಗಮ, ಮಂಡಳಿಗಳ ಅಧ್ಯಕ್ಷರ ನೇಮಕಾತಿ, ಲೋಕಸಭಾ ಚುನಾವಣೆ (Lok Sabha Election) ಕಡೆ ಗಮನ ಹರಿಸುತ್ತಿದೆ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ  ಬಿ.ವೈ.ವಿಜಯೇಂದ್ರ (BY Vijayendra) ಆಕ್ಷೇಪಿಸಿದರು.
ಇಂದು ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ತಯಾರಿ ಕಡೆ ಗಮನ ಕೊಡಿ. ಅದರ ವಿಚಾರದಲ್ಲಿ ನಮ್ಮ ತಕರಾರಿಲ್ಲ. ಆದರೆ, ನಿಮ್ಮ ಆದ್ಯತೆ ಏನು ಎಂದು ಪ್ರಶ್ನಿಸಿದರು.
ಯಡಿಯೂರಪ್ಪ (Yediyurappa) ಅವರು ಮುಖ್ಯಮಂತ್ರಿ ಆಗಿದ್ದಾಗ ಬಿಜೆಪಿ ಸರಕಾರವು ಬೇಸಿಗೆಯಲ್ಲೂ ರೈತರಿಗೆ ತೊಂದರೆ ಆಗಬಾರದೆಂದು ಕನಿಷ್ಠ 7 ಗಂಟೆ ವಿದ್ಯುತ್ ಕೊಟ್ಟಿತ್ತು ಎಂದು ನೆನಪಿಸಿದರು. ಬೇಸಿಗೆಯಲ್ಲಿ ವಿದ್ಯುತ್ ಕೊರತೆ ಆಗುವುದಾಗಿ ಮುಂಚಿತವಾಗಿಯೇ ಆಲೋಚಿಸಿ ಬಿಜೆಪಿ ಸರ್ಕಾರ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಸಿತ್ತು. ಆದರೆ, ಮುಂಗಾರು, ಹಿಂಗಾರು ವೈಫಲ್ಯ, ಒಂದೆರಡು ತಾಸು ವಿದ್ಯುತ್ ಇಲ್ಲದೆ ರೈತರು ಪರದಾಡುತ್ತಿದ್ದರೂ ರಾಜ್ಯ ಸರ್ಕಾರ ಹೊಣೆಗೇಡಿಯಾಗಿ ವರ್ತಿಸಿದೆ. ಇದರಿಂದ ರೈತರು ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದು ಟೀಕಿಸಿದರು. ರೋಮ್ ಹೊತ್ತಿ ಉರಿಯಲು ದೊರೆ ಪಿಟೀಲು ಬಾರಿಸಿದ ಪರಿಸ್ಥಿತಿ ಇದೆಂದು ಕಿಡಿಕಾರಿದರು.
BY Vijayendra 2
ಆಡಳಿತಕ್ಕೆ ಬಂದು ಆರು ತಿಂಗಳಾದರೂ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಮೋಜಿನಲ್ಲಿ ಮುಳುಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳು ಒಂದು ಕಡೆ ತಮ್ಮ ಸ್ವಗೃಹ ನವೀಕರಣ, ಅಲಂಕಾರಕ್ಕೆ ಕೋಟಿಗಟ್ಟಲೆ ಹಣ ಬಳಸುತ್ತಾರೆ. ಬರಗಾಲವಿದ್ದರೂ ಸಚಿವರಿಗೆ ಹೊಸ ಕಾರು ಖರೀದಿ ನಡೆದಿದೆ. ಇದು ಅವಿವೇಕತನದ ಪ್ರದರ್ಶನ ಎಂದು ಟೀಕಿಸಿದರು. ಇದು ನಾಡಿನ ರೈತರಿಗೆ ಮಾಡುವ ಅವಮಾನ. ಪದೇಪದೇ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುತ್ತಾರೆ. ಹಾಗಿದ್ದರೆ ರಾಜ್ಯ ಸರಕಾರಕ್ಕೆ ಜವಾಬ್ದಾರಿ ಇಲ್ಲವೇ ಎಂದು ಕೇಳಿದರು. ಜವಾಬ್ದಾರಿ ಮರೆತ ರಾಜ್ಯ ಸರಕಾರದ ಕಿವಿ ಹಿಂಡುವ ಕೆಲಸವನ್ನು ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ನಾವು ಮಾಡುತ್ತೇವೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ರಾಹುಲ್‌ ಎಂದರೆ ರಾಹು ಗ್ರಹ – ಮೋದಿಯನ್ನು ಟೀಕಿಸಿದ್ದಕ್ಕೆ ವಿಜಯೇಂದ್ರ ಗರಂ
ಜಮೀರ್ ಅಹ್ಮದ್ ಎಂಬ ಪುಣ್ಯಾತ್ಮ ಇವತ್ತು ರಸ್ತೆಯಲ್ಲಿ ಓಡಾಡಲು ಬಿಟ್ಟದ್ದೇ ನಮ್ಮ ಅಪರಾಧ. ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಸ್ಪೀಕರ್ ಸ್ಥಾನಕ್ಕೆ ಎಲ್ಲರೂ ಪಕ್ಷಾತೀತವಾಗಿ ಗೌರವ ಕೊಡುತ್ತಾರೆ. ಆ ಸ್ಥಾನದಲ್ಲಿ ಕುಳಿತ ವ್ಯಕ್ತಿಗೆ ಒಂದು ಜಾತಿ, ಧರ್ಮದ ಬಣ್ಣ ಕೊಡುವ ಕಾರ್ಯವನ್ನು ಜಮೀರ್ ಅಹ್ಮದ್ ಮಾಡಿದ್ದಾರೆ. ಇದು ತಲೆತಗ್ಗಿಸುವ ಕೆಲಸವಲ್ಲವೇ? ಇಷ್ಟೊತ್ತಿಗಾಗಲೇ ಅವರ ರಾಜೀನಾಮೆ ಪಡೆಯಬೇಕಿತ್ತು. ಜಮೀರ್ ಅಹ್ಮದ್ ಮುಂದಿನ ಅಧಿವೇಶನದಲ್ಲಿ ಹೇಗೆ ಪಾಲ್ಗೊಳ್ಳುತ್ತಾರೆ ಎಂದು ನೋಡುವುದಾಗಿ ವಿಜಯೇಂದ್ರ ಅವರು ಸವಾಲೆಸೆದರು.

ಮುಖ್ಯಮಂತ್ರಿಗಳು ತಕ್ಷಣ ಜಮೀರ್ ರಾಜೀನಾಮೆ ಪಡೆಯಲಿ ಎಂದು ಅವರು ಆಗ್ರಹಿಸಿದರು. ಇದು ದಲಿತವಿರೋಧಿ ಸರಕಾರ ಎಂದು ನೀವು ಈಗಾಗಲೇ ಸಾಬೀತುಪಡಿಸಿದ್ದೀರಿ ಎಂದು ಆಕ್ಷೇಪಿಸಿದರು. ಇದರ ವಿರುದ್ಧ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಅಭಿವೃದ್ಧಿಗೆ ಸಂಬಂಧಿಸಿ ಶಾಸಕರಿಗೆ ಒಂದು ರೂಪಾಯಿ ಅನುದಾನವೂ ಸಿಗುತ್ತಿಲ್ಲ. ಆಡಳಿತ ಪಕ್ಷದ ಸದಸ್ಯರೂ ತಮ್ಮ ಕ್ಷೇತ್ರದಲ್ಲಿ ಗೌರವಯುತವಾಗಿ ಓಡಾಡದ ಹಾಗಾಗಿದೆ. ರಾಜ್ಯ ಸರಕಾರ ಜನರ ವಿಶ್ವಾಸ ಕಳಕೊಂಡಿದೆ. ರೈತ ವಿರೋಧಿ, ಬಡವರ ವಿರೋಧಿ ಸರಕಾರಕ್ಕೆ ಎಚ್ಚರಿಕೆ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಹಿಂದೆ ಕಾಂಗ್ರೆಸ್ ಸರಕಾರ ಇದ್ದಾಗ ಅನೇಕ ಹಿಂದೂ ಕಾರ್ಯಕರ್ತರ ಹತ್ಯೆ ಆಗಿತ್ತು. ಮುಂದೆ ಅದಾಗದಂತೆ ನಾವು ಇವತ್ತು ಎಚ್ಚರ ವಹಿಸಬೇಕಿದೆ. ಹಿಂದೂ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ಯಾರೂ ಹೆದರುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

ಭ್ರಷ್ಟ, ದುಷ್ಟ ಸರಕಾರವನ್ನು ಎಲ್ಲರೂ ಒಗ್ಗಟ್ಟಾಗಿ ಎಚ್ಚರಿಸುತ್ತೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನಗಳನ್ನೂ ಗೆಲ್ಲಸಿ, ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿಯಾಗುವಂತೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.  ಸಂಸದ ಮತ್ತು ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಅವರು ಹಾಜರಿದ್ದರು.
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Shivam Dube
Cricket

6 ಸಿಕ್ಸ್‌, 4 ಬೌಂಡರಿ, 2 ವಿಕೆಟ್‌ – ದುಬೆ ಸ್ಫೋಟಕ ಆಟ, ಭಾರತಕ್ಕೆ 17 ರನ್‌ಗಳ ಜಯ

Public TV
By Public TV
4 hours ago
KSRTC
Bengaluru City

ಬೆಂಗಳೂರು ಚಲೋ ನಡೆಯುತ್ತೆ, ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗಿ: ಸಂಘಟನೆ ಮನವಿ

Public TV
By Public TV
5 hours ago
Nelamangala Crime
Bengaluru City

ಕತ್ತು ಹಿಸುಕಿ ವೃದ್ಧೆಯ ಹತ್ಯೆ – ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್

Public TV
By Public TV
5 hours ago
Ramalinga Reddy
Bengaluru City

Transport Strike – 38ರ ಬದಲು 26 ತಿಂಗಳ ಹಿಂಬಾಕಿಗೆ ಸರ್ಕಾರ ಒಪ್ಪಿಗೆ

Public TV
By Public TV
5 hours ago
devendra fadnavis
Latest

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ಧ ಶೇ.5 ಮೀಸಲಾತಿ ರದ್ದು

Public TV
By Public TV
6 hours ago
Guru Raghavendra
Districts

ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ ಗುರುವೈಭವೋತ್ಸವ – ರಾಯರ 405ನೇ ಪಟ್ಟಾಭಿಷೇಕ ಮಹೋತ್ಸವ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?