ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲೇ ಆರೋಪಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್‌ಸ್ಪೆಕ್ಟರ್ ಹಾಗೂ ಹೆಡ್ ಕಾನ್‌ಸ್ಟೇಬಲ್ ಅಮಾನತು ಮಾಡಲಾಗಿದೆ.
ಪೊಲೀಸ್ ಉಪನಿರೀಕ್ಷಕ ಮಧು ಮತ್ತು ಪ್ರಭಾರ ಠಾಣಾಧಿಕಾರಿ ಸುಜಾತ ಅಮಾನತುಗೊಂಡಿದ್ದಾರೆ. ಆರೋಪಿಗಳನ್ನು ಬಂಧಿಸುವಾಗ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಸರಿಯಾಗಿ ಪಾಲಿಸಿಲ್ಲ. ಬಂಧಿಸುವಾಗ ಸರಿಯಾದ ಕ್ರಮ ಕೈಗೊಂಡಿಲ್ಲ ಎಂದು ಸರ್ಕಲ್ ಇನ್‌ಸ್ಪೆಕ್ಟರ್ ಅಮಾನತು ಮಾಡಿದ್ದಾರೆ. ಇದನ್ನೂ ಓದಿ: ಉಡುಪಿ| ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು
Advertisement
Advertisement
ನ.10 ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿತ್ತು. ಕೇರಳ ಮೂಲದ ಬಿಜು ಮೋಹನ್ (44) ಪೊಲೀಸ್ ಠಾಣೆಯಲ್ಲಿ ಸಾವನ್ನಪ್ಪಿದ್ದ. ಪೊಲೀಸ್ ಕಸ್ಟಡಿಯಲ್ಲಿದ್ದಾಗ ಆರೋಪಿ ಸಾವಿಗೀಡಾಗಿದ್ದ.
Advertisement
Advertisement
ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ. ಮದ್ಯಪಾನ ಮಾಡಿ ಮಹಿಳೆಯನ್ನು ಚುಡಾಯಿಸಿದ್ದ ಆರೋಪದ ಮೇಲೆ ಆತನನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಯಲ್ಲಿ ಇರಿಸಿದ್ದರು. ಇದನ್ನೂ ಓದಿ: ನಕಲಿ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ್ 7 ದಿನ ಪೊಲೀಸ್ ಕಸ್ಟಡಿಗೆ