ವಾಷಿಂಗ್ಟನ್: ಉತ್ತರ ಅಟ್ಲಾಂಟಿಕ್‌ನಲ್ಲಿ ಟೈಟಾನಿಕ್ (Titanic) ಅವಶೇಷಗಳನ್ನು ವೀಕ್ಷಿಸಲು ತೆರಳಿದ್ದ ಜಲಾಂತರ್ಗಾಮಿಯೊಂದು (Submarine) ನಾಪತ್ತೆಯಾಗಿರುವ ಘಟನೆ ನಡೆದಿತ್ತು. ಇದೀಗ ನಾಪತ್ತೆಯಾಗಿರುವ ಜಲಾಂತರ್ಗಾಮಿಯಲ್ಲಿ ಪ್ರಯಾಣಿಸುತ್ತಿದ್ದ ಐವರಲ್ಲಿ ಪಾಕಿಸ್ತಾನದ ಪ್ರಮುಖ ಉದ್ಯಮಿ (Pakistani businessman) ಹಾಗೂ ಅವರ ಪುತ್ರ ಸೇರಿದ್ದರು ಎಂದು ಅವರ ಕುಟುಂಬ ಮಂಗಳವಾರ ತಿಳಿಸಿದೆ.
ಓಷನ್‌ಗೇಟ್ ಎಕ್ಸ್‌ಪೆಂಡಿಷನ್ಸ್ ಕಂಪನಿ ನಿರ್ವಹಿಸುತ್ತಿದ್ದ ಟೂರಿಸ್ಟ್ ಕ್ರಾಫ್ಟ್ ಭಾನುವಾರ ಸಾಗರಕ್ಕಿಳಿದ 2 ಗಂಟೆಗಳಲ್ಲಿ ಸಂಪರ್ಕವನ್ನು ಕಡಿದುಕೊಂಡಿದೆ. ಅದು 96 ಗಂಟೆಗಳ ಆಮ್ಲಜನಕ ಪೂರೈಕೆ ಹೊಂದಿದೆ. ಜಲಾಂತರ್ಗಾಮಿಯೊಂದಿಗೆ ಸಂಪರ್ಕವನ್ನು ಮರುಸ್ಥಾಪಿಸಲು ಹಾಗೂ ಅದನ್ನು ಸುರಕ್ಷಿತವಾಗಿ ಕರೆತರಲು ಅನೇಕ ಸರ್ಕಾರಿ ಸಂಸ್ಥೆಗಳು ಹಾಗೂ ಕಂಪನಿಗಳು ಜಂಟಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೀಗ ನಾಪತ್ತೆಯಾಗಿರುವ ಜಲಾಂತರ್ಗಾಮಿಯಲ್ಲಿ ಪ್ರಯಾಣಿಸುತ್ತಿದ್ದ ಐವರಲ್ಲಿ ಪಾಕಿಸ್ತಾನದ ಶ್ರೀಮಂತ ಉದ್ಯಮಿಗಳಲ್ಲೊಬ್ಬರಾದ ಶಹಜಾದಾ ದಾವೂದ್ (Shahzada Dawood) ಹಾಗೂ ಅವರ ಮಗ ಹುಸೇನೆ ದಾವೂದ್ ಇದ್ದರು ಎಂಬುದು ತಿಳಿದುಬಂದಿದೆ. ಶಹಜಾದಾ ದಾವೂದ್ ಖ್ಯಾತ ಎಂಗ್ರೋ ಕಂಪನಿಯ ಉಪಾಧ್ಯಕ್ಷ. ಎಂಗ್ರೋ ಇಂಧನ, ಕೃಷಿ, ಪೆಟ್ರೋಕೆಮಿಕಲ್ಸ್ ಹಾಗೂ ದೂರಸಂಪರ್ಕದಲ್ಲಿ ಹೂಡಿಕೆ ಮಾಡುವ ಸಂಸ್ಥೆಯಾಗಿದೆ. ಇದು 2022ರ ಕೊನೆಯಲ್ಲಿ 350 ಶತಕೋಟಿ ರೂ. ಆದಾಯವನ್ನು ಘೋಷಿಸಿದೆ. ಇದನ್ನೂ ಓದಿ: ಟೈಟಾನಿಕ್ ಅವಶೇಷ ನೋಡಲು ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜಲಾಂತರ್ಗಾಮಿ ನಾಪತ್ತೆ
ನಾಪತ್ತೆಯಾಗಿರುವ ಜಲಾಂತರ್ಗಾಮಿಯಲ್ಲಿ ಪ್ರಯಾಣಿಸುತ್ತಿದ್ದ ಮತ್ತೊಬ್ಬ ಪ್ರಯಾಣಿಕನನ್ನು ಬ್ರಿಟಿಷ್ ಉದ್ಯಮಿ ಹಮೀಶ್ ಹಾರ್ಡಿಂಗ್ ಎಂದು ಗುರುತಿಸಲಾಗಿದೆ. ಇದೀಗ ಅಮೆರಿಕ ಹಾಗೂ ಕೆನಡಾದ ಹಡಗುಗಳು ಮಾತ್ರವಲ್ಲದೇ ವಿಮಾನಗಳು ಕೂಡಾ ಜಲಾಂತರ್ಗಾಮಿ ಹುಡುಕಾಟಕ್ಕೆ ಇಳಿದಿವೆ. ಇದನ್ನೂ ಓದಿ: ಅಮೆರಿಕದಲ್ಲಿ ಎಲೋನ್ ಮಸ್ಕ್ ಭೇಟಿಯಾಗ್ತಾರೆ ಪ್ರಧಾನಿ ಮೋದಿ