ನವದೆಹಲಿ: ಜ್ಞಾನವಾಪಿ (Gyanvapi) ಸಮೀಕ್ಷೆಯ ವರದಿಯನ್ನು (Survey Report) ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದೆ. ವರದಿ ಸಲ್ಲಿಕೆಗೆ ನಾಲ್ಕು ವಾರದ ಸಮಯ ವಿಸ್ತರಣೆಯಾದ ಬಳಿಕ ಇಂದು ಅಂತಿಮವಾಗಿ ನ್ಯಾ. ಡಾ.ಅಜಯ್ ಕೃಷ್ಣ ವಿಶ್ವೇಶ್ ಅವರಿಗೆ ಎಎಸ್‌ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಅವಿನಾಶ್ ಮೊಹಾಂತಿ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದ್ದಾರೆ.
ಜಿಲ್ಲಾ ನ್ಯಾಯಾಧೀಶ ಡಾ.ಅಜಯ್ ಕೃಷ್ಣ ವಿಶ್ವೇಶ್ ಅವರ ಆದೇಶದ ಮೇರೆಗೆ ಎಎಸ್‌ಐ ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಜು.24ರಂದು ಸರ್ವೆ ಕಾರ್ಯ ಆರಂಭಿಸಲಾಗಿತ್ತು, ನ.2ರಂದು ಸರ್ವೆ ಕಾರ್ಯ ಪೂರ್ಣಗೊಂಡಿತ್ತು. ಸರ್ವೆ ಬಳಿಕ ವರದಿಯನ್ನು ಸಿದ್ಧಪಡಿಸಲು 15 ದಿನಗಳ ಹೆಚ್ಚುವರಿ ಸಮಯ ನೀಡಲಾಗಿತ್ತು. ಬಳಿಕ ವಿವಿಧ ಹಂತದಲ್ಲಿ ನ್ಯಾಯಾಲಯವು ವರದಿ ಸಲ್ಲಿಸಲು ನಾಲ್ಕು ಬಾರಿ ಹೆಚ್ಚುವರಿ ಸಮಯವನ್ನು ನೀಡಲಾಗಿತ್ತು. ಡಿಸೆಂಬರ್ 21 ರಂದು ಅರ್ಜಿದಾರರೊಂದಿಗೆ ಈ ವರದಿಯನ್ನು ಹಂಚಿಕೊಳ್ಳಲಾಗುವುದು ಮತ್ತು ಅದರ ಪ್ರತಿಯನ್ನು ಸುಪ್ರೀಂ ಕೋರ್ಟ್‌ಗೆ ಕಳುಹಿಸಲಾಗುವುದು. ಇದನ್ನೂ ಓದಿ: ಮಕ್ಕಳೊಂದಿಗೆ ಮಗುವಾದ ಮೋದಿ – ತನಗಾಗಿ ವಿಶೇಷ ಕವಿತೆ ಹಾಡಿದ ಬಾಲಕಿಗೆ ಭೇಷ್ ಎಂದ ಪ್ರಧಾನಿ
Advertisement
Advertisement
ವರದಿಯ ಸಲ್ಲಿಕೆ ಕುರಿತು ಮಾತನಾಡಿದ ಹಿಂದೂ ಪರ ವಕೀಲ ಮದನ್ ಮೋಹನ್ ಯಾದವ್, ಎಎಸ್‌ಐ ಇಂದು ವಾರಣಾಸಿ ಜಿಲ್ಲಾ ನ್ಯಾಯಾಲಯದ ಮುಂದೆ ತನ್ನ ವೈಜ್ಞಾನಿಕ ಸಮೀಕ್ಷೆ ವರದಿಯನ್ನು ಸಲ್ಲಿಸಿದೆ. 17 ನೇ ಶತಮಾನದ ಮಸೀದಿಯನ್ನು ಹಿಂದೂ ದೇವಾಲಯದ ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಎಎಸ್‌ಐ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಆವರಣದ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸಲಾಗಿದೆ ಎಂದರು. ಇದನ್ನೂ ಓದಿ: ವಾರಣಾಸಿಯಲ್ಲಿ ವಿಶ್ವದ ಅತಿದೊಡ್ಡ ಧ್ಯಾನ ಕೇಂದ್ರ ಉದ್ಘಾಟಿಸಿದ ಪಿಎಂ ಮೋದಿ- ವಿಶೇಷತೆ ಏನು?
Advertisement
Advertisement
ಅಲಹಾಬಾದ್ ಹೈಕೋರ್ಟ್ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದ ಬಳಿಕ ಸಮೀಕ್ಷೆಯು ಪ್ರಾರಂಭವಾಯಿತು. ಅಲಹಾಬಾದ್ ಹೈಕೋರ್ಟಿನ ಆದೇಶದ ನಂತರ, ಜ್ಞಾನವಾಪಿ ಸಮಿತಿಯು ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸಿತ್ತು. ಸಿಜೆಐ ಡಿ.ವೈ ಚಂದ್ರಚೂಡ್ ಪೀಠ ಹೈಕೋರ್ಟ್‌ನ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು. ಇದನ್ನೂ ಓದಿ: ಐಸಿಸ್ ಉಗ್ರರ ನಂಟು ಪ್ರಕರಣ – ಬೆಂಗ್ಳೂರು ಸೇರಿದಂತೆ 4 ರಾಜ್ಯಗಳ 19 ಕಡೆ NIA ದಾಳಿ