ನವದೆಹಲಿ: ಬಿಜೆಪಿ (BJP) ತನ್ನ ಅಭ್ಯರ್ಥಿಗಳನ್ನು ಖರೀದಿಸಲು ಪ್ರಯತ್ನಿಸುತ್ತಿದೆ ಎಂದು ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ (Arvind Kejriwal) ಆರೋಪ ಮಾಡಿದ ಬೆನ್ನಲ್ಲೇ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳ(ACB) ತನಿಖೆಗೆ ಆದೇಶಿಸಿದ್ದಾರೆ.
ತನಿಖೆಗೆ ಆದೇಶಿಸಿದ ಕೆಲವೇ ಗಂಟೆಗಳಲ್ಲಿ ಎಸಿಬಿ ಅಧಿಕಾರಿಗಳು ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿ ನೋಟಿಸ್ ನೀಡಿದ್ದಾರೆ.
Advertisement
ಬಿಜೆಪಿ ಖರೀದಿಗೆ ಪ್ರಯತ್ನಿಸಿದ 16 ಆಪ್ ಶಾಸಕರು ಯಾರು? ಆ ಶಾಸಕರ ಫೋನ್ ನಂಬರ್ ಯಾವುದು? ಆರೋಪಕ್ಕೆ ಸಾಕ್ಷ್ಯ ನೀಡುವಂತೆ ಎಸಿಬಿ ನೋಟಿಸ್‌ನಲ್ಲಿ ತಿಳಿಸಿದೆ.
Advertisement
Watch: on ACB Action on Aam Aadmi party, Delhi BJP President Virendra Sachdeva says, “Sanjay Singh, Arvind Kejriwal, if you lie, be ready to face the consequences. I said this in the morning, and I am saying it again. It won’t work that you say anything baseless and don’t face… pic.twitter.com/FJ0MEKd0J1
— IANS (@ians_india) February 7, 2025
Advertisement
ದೆಹಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿಷ್ಣು ಮಿತ್ತಲ್ ಅವರು ಲೆಫ್ಟಿನೆಂಟ್ ಗವರ್ನರ್ ಕಚೇರಿಗೆ ಸಲ್ಲಿಸಿದ ದೂರಿನ ಆಧಾರದ ಮೇಲೆ ಎಸಿಬಿ ತನಿಖೆಗೆ ಆದೇಶಿಸುವಂತೆ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಲಾಗಿದೆ. ಇದನ್ನೂ ಓದಿ: USAID| 294 ಮಂದಿ ಬಿಟ್ಟು 13,500ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಗೇಟ್‌ಪಾಸ್ ನೀಡಿದ ಟ್ರಂಪ್!
Advertisement
#WATCH | A team of Anti Corruption Bureau (ACB) arrives at the residence of AAP national convener Arvind Kejriwal after Delhi LG’s principal secretary writes to the chief secretary to conduct an ACB Inquiry on allegations of bribes offered to MLAs of the Aam Aadmi Party pic.twitter.com/yt2ZMW5ZH3
— ANI (@ANI) February 7, 2025
ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಕೇಜ್ರಿವಾಲ್, ವಿಧಾನಸಭಾ ಚುನಾವಣಾ ಫಲಿತಾಂಶ (Delhi Election Results) ಪ್ರಕಟವಾಗುವ ಮುನ್ನ ಬಿಜೆಪಿ 16 ಆಪ್ ಅಭ್ಯರ್ಥಿಗಳನ್ನು ಖರೀದಿಸಲು ಪ್ರಯತ್ನಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.
ಎಎಪಿ ಅಭ್ಯರ್ಥಿಗಳು ಬಿಜೆಪಿ ಸೇರಿದರೆ ಸಚಿವ ಸ್ಥಾನದ ಜೊತೆ 15 ಕೋಟಿ ರೂ.ಗಳ ನೀಡುವ ಆಫರ್ ನೀಡಲಾಗಿದೆ ಅವರು ಆರೋಪಿಸಿದ್ದರು.