ಬೆಂಗಳೂರು: ನನ್ನ ಸಹೋದರಿಯನ್ನು ಕೆಲಸದ ವಿಚಾರಕ್ಕೆ ಕೊಲೆ ಮಾಡಲಾಗಿದೆ. ಸರ್ಕಾರದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇ ತಪ್ಪಾ? ಎಂದು ಹತ್ಯೆಯಾದ ಉಪ ನಿರ್ದೇಶಕಿ ಪ್ರತಿಮಾ (Prathima) ಅವರ ಸಹೋದರ ಗೋಳಾಡಿದ್ದಾರೆ.
ಗಣಿ ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ (Deputy Director) ತಿಮಾ ತೀರ್ಥಹಳ್ಳಿ ಮೂಲದವರಾಗಿದ್ದು, ಸುಬ್ರಹ್ಮಣ್ಯಪುರದ (Subrahmanyapur) ದೊಡ್ಡಕಲ್ಲಸಂದ್ರ ಬಳಿಕ ಕುವೆಂಪು ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಳೆದ ರಾತ್ರಿ ಅವರನ್ನು ತಮ್ಮ ಮನೆಯಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
Advertisement
Advertisement
ಕಳೆದ 8 ವರ್ಷಗಳಿಂದ ಅದೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪೂರ್ಣಿಮಾ ಕಳೆದ ರಾತ್ರಿ ಮನೆತಲ್ಲಿ ಒಬ್ಬರೇ ಇದ್ದರು. ರಾತ್ರಿ 8 ಗಂಟೆ ವೇಳೆಗೆ ಅವರನ್ನು ಡ್ರೈವರ್ ಕಚೇರಿಯಿಂದ ಮನೆಗೆ ಬಿಟ್ಟು ಬಂದಿದ್ದರು. ಇಂದು ಬೆಳಗ್ಗೆ 8 ಗಂಟೆಗೆ ಪ್ರತಿಮಾ ಸಹೋದರ ಕರೆ ಮಾಡಿದರೂ ಅದನ್ನು ಸ್ವೀಕರಿಸಿರಲಿಲ್ಲ. ಬಳಿಕ ಫ್ಲ್ಯಾಟ್ ಬಳಿ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಚಾಕು ಇರಿದು ಉಪನಿರ್ದೇಶಕಿಯ ಬರ್ಬರ ಹತ್ಯೆ
Advertisement
Advertisement
ಪ್ರತಿಮಾ ಅವರನ್ನು ಕಳೆದ ರಾತ್ರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಇಂದು ಬೆಳಗ್ಗೆ 8:30ರ ವೇಳಗೆ ಘಟನೆ ಬೆಳಕಿಗೆ ಬಂದಿದೆ. ಇದೀಗ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಿಧಿ ನಿಕ್ಷೇಪ ತೋರಿಸುವುದಾಗಿ 16 ಲಕ್ಷ ರೂ. ನಾಮ – ವಂಚಿತರಿಂದ ಜ್ಯೋತಿಷಿಯ ಕಿಡ್ನಾಪ್