Connect with us

Latest

ಯಡಿಯೂರಪ್ಪ ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಸುಬ್ರಮಣಿಯನ್ ಸ್ವಾಮಿ

Published

on

Share this

ನವದೆಹಲಿ: ನಾಯಕತ್ವ ಬದಲಾವಣೆ ಕುರಿತು ರಾಜ್ಯದಲ್ಲಿ ಭಾರೀ ಬೆಳವಣಿಗೆಗಳು ಆಗುತ್ತಿರುವ ಸಂದರ್ಭದಲ್ಲಿಯೇ ಬಿಜೆಪಿ ರಾಷ್ಟ್ರೀಯ ನಾಯಕರು ಈ ಕುರಿತು ಮೌನ ಮುರಿದಿದ್ದು, ಯಡಿಯೂರಪ್ಪ ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಬಿಜೆಪಿಯನ್ನು ಮೊದಲು ಅಧಿಕಾರಕ್ಕೆ ತಂದವರು ಬಿ.ಎಸ್.ಯಡಿಯೂರಪ್ಪ. ಅವರ ನೇರ ವ್ಯಕ್ತಿತ್ವದಿಂದಾಗಿ ಇದೀಗ ಅವರನ್ನು ಕೆಳಗಿಳಿಸುವ ಪಿತೂರಿಯನ್ನು ಕೆಲವರು ನಡೆಸಿದ್ದಾರೆ. ಆದರೆ ಯಡಿಯೂರಪ್ಪನವರು ಇಲ್ಲದೆ ಬಿಜೆಪಿ ಮರಳಿ ಅಧಿಕಾರಕ್ಕೆ ಬರುವುದಿಲ್ಲ. ಅವರು ಮರಳಿ ಪಕ್ಷಕ್ಕೆ ಬಂದಿದ್ದಕ್ಕೆ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಏರಿತು. ಮರಳಿ ಇದೇ ತಪ್ಪನ್ನು ಯಾಕೆ ಮಾಡಲಾಗುತ್ತಿದೆ ಎಂದು ಅವರು ಟ್ವೀಟ್ ಮೂಲಕ ತಿವಿದಿದ್ದಾರೆ. ಇದನ್ನೂ ಓದಿ: ಹೈಕಮಾಂಡ್ ಕೈ ಸೇರಿದೆ ವರದಿ – ಜಾತಿ ಚೌಕಟ್ಟು ಮೀರುತ್ತಾ ಬಿಜೆಪಿ?

ಈ ಮೂಲಕ ಕರ್ನಾಟಕದಲ್ಲಿನ ನಾಯಕತ್ವ ಬದಲಾವಣೆ ಕುರಿತು ಕೇಂದ್ರದ ನಾಯಕರು ತುಟಿ ಬಿಚ್ಚಿದ್ದು, ಯಡಿಯೂರಪ್ಪನವರ ಪರವಾಗಿ ಬ್ಯಾಟ್ ಬೀಸಿದ್ದಾರೆ. ಅಲ್ಲದೆ ಈ ಮೂಲಕ ಬಿಜೆಪಿ ಹೈ ಕಮಾಂಡ್‍ಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಬಿಎಸ್‍ವೈ ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ. ಹಿಂದೆ ಮಾಡಿದ ತಪ್ಪನ್ನೇ ಹೈಕಮಾಂಡ್ ಏಕೆ ಪುನರಾವರ್ತನೆ ಮಾಡುತ್ತಿದೆ ಎಂದು ಪ್ರಶ್ನೆ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement