ಶ್ರೀನಗರ: ಕಾಶ್ಮೀರಿ ಪಂಡಿತರ ನಿರ್ಗಮನದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಅವರ ಪಾತ್ರವಿಲ್ಲ. ಇದಕ್ಕೆ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮುಹಮ್ಮದ್ ಸಯೀದ್ ಮತ್ತು ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಕಾರಣ ಎಂದು ಬಿಜೆಪಿಯ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರು ಮತ್ತು ಪಂಡಿತರು ಸಮಾನರು ಮತ್ತು ಅವರಲ್ಲಿ ಒಂದೇ ರಕ್ತವಿದೆ. ನೀವು ಎರಡರ ಡಿಎನ್‍ಎ ಪರೀಕ್ಷೆಯನ್ನು ಮಾಡಿದರೆ, ಫಲಿತಾಂಶಗಳು ಒಂದೇ ಆಗಿರುತ್ತವೆ. ಪಂಡಿತರಿಗೆ ಅನ್ಯಾಯವಾಗಿದೆ. ವಿ.ಪಿ. ಸಿಂಗ್ ಮತ್ತು ಮುಫ್ತಿ ಮುಹಮ್ಮದ್ ಸಯೀದ್ ಅವರು ಪಂಡಿತ್ ನಿರ್ಗಮನಕ್ಕೆ ಕಾರಣರಾಗಿದ್ದಾರೆ ಎಂದ ಅವರು ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ನೋಡಿಲ್ಲ ಎಂದು ಹೇಳಿದರು.
Advertisement
Advertisement
ಚಂದ್ರಶೇಖರ್ ಸರ್ಕಾರದಲ್ಲಿ ಮಂತ್ರಿಯಾದಾಗ, ಆಗಿನ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಸೈಫುದ್ದೀನ್ ಸೋಜ್ ಅವರ ಮಗಳನ್ನು ಜೆಕೆಎಲ್‍ಎಫ್ ಕಿಡ್ನಾಪ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮುಫ್ತಿ ಮತ್ತು ವಿಪಿ ಸಿಂಗ್ ಸೇರಿದಂತೆ 13 ಜನರನ್ನು ಜೈಲಿನಿಂದ ಬಿಡುಗಡೆ ಮಾಡಿದರು. ಕೊನೆಗೆ ಆಟೋದಲ್ಲಿ ಅವರ ಮಗಳನ್ನು ಕಳುಹಿಸಿದ್ದರು. ಆದರೆ ಘಟನೆಗೆ ಕಾರಣರಾದವರ ಬಗ್ಗೆ ಈವರೆಗೂ ತನಿಖೆಯಾಗಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: 13ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
Advertisement
ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ. ಇಲ್ಲಿ ಜನರು ತಮ್ಮ ಮಾತುಕತೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು. ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗಳು ನಡೆದ ನಂತರ ನೀವು ಉತ್ತಮ ಪ್ರತಿನಿಧಿಗಳನ್ನು ಪಡೆಯುತ್ತೀರಿ ಎಂದು ಭಾವಿಸುತ್ತೇನೆ ಎಂದರು. ಇದನ್ನೂ ಓದಿ: ನೇಪಾಳದ ಪ್ರಧಾನಿಗೆ ವಿಶಿಷ್ಟ ಉಡುಗೊರೆ ನೀಡಿದ ಪ್ರಧಾನಿ ಮೋದಿ