ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತವರಲ್ಲಿ ಅನುದಾನದ ಪಾಲಿಟಿಕ್ಸ್ ಶುರುವಾಗಿದೆ. ಬಿಜೆಪಿ ಶಾಸಕನ ಅನುದಾನವನ್ನು ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಂದ ಈ ರೀತಿ ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಮಾಜಿ ಮೇಯರ್ ಶಿವಕುಮಾರ್ (Ex Mayor Shivakumar) ಆರೋಪಿಸಿದ್ದಾರೆ. ಇದನ್ನೂ ಓದಿ: ಸಮಸ್ಯೆ ಪರಿಹರಿಸುವಂತೆ ಅಯೋಧ್ಯೆ ರಾಮನಿಗೆ ಮಲೆನಾಡಿನ ಅಡಿಕೆ ಹಿಂಗಾರ ಸಮರ್ಪಣೆ
Advertisement
Advertisement
ಏನಿದು ಅನುದಾನ ಪಾಲಿಟಿಕ್ಸ್?: ಕಳೆದ ಬಿಜೆಪಿ ಸರ್ಕಾರದಲ್ಲಿ ಕೃಷ್ಣರಾಜ ಕ್ಷೇತ್ರಕ್ಕೆ 45 ಕೋಟಿ ರೂ. ವಿಶೇಷ ಅನುದಾನ ಮಂಜೂರಾಗಿತ್ತು. ಅಂದಿನ ಶಾಸಕರಾಗಿದ್ದ ಎಸ್.ಎ ರಾಮದಾಸ್ ಅವಧಿಯಲ್ಲಿ ಕೆ.ಆರ್ ಕ್ಷೇತ್ರದ ಅಭಿವೃದ್ಧಿಗೆ ಮಂಜೂರಾಗಿದ್ದ 45 ಕೋಟಿ ರೂ. ಅನುದಾನ ನೀಡಲಾಗಿತ್ತು. ಸದ್ಯ ಈ ಅನುದಾನವನ್ನು ಚಾಮರಾಜ, ಎನ್.ಆರ್ ಕ್ಷೇತ್ರಗಳಿಗೆ ಮರು ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
Advertisement
ಚಾಮರಾಜ ಕ್ಷೇತ್ರಕ್ಕೆ (Chamarajanagar Constituency) 20 ಕೋಟಿ, ಎನ್.ಆರ್ ಕ್ಷೇತ್ರಕ್ಕೆ 25 ಕೋಟಿ ಹಣ ಹಂಚಿಕೆ ಮಾಡಲಾಗಿದೆ. ಬಿಜೆಪಿ ಶಾಸಕರಿದ್ದಾರೆ ಎನ್ನುವ ಕಾರಣಕ್ಕೆ ಕೆ.ಆರ್ ಕ್ಷೇತ್ರದ ಅನುದಾನ ಬೇರೆಡೆ ಹಂಚಿಕೆ ಮಾಡಲಾಗಿದೆ ಎಂದು ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.