ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ್ದು, ಸಿನಿಮಾ ರಂಗಕ್ಕೂ ಬಂಪರ್ ಕೊಡುಗೆ ನೀಡಿದ್ದಾರೆ. ಪ್ರಸ್ತುತ ವಾರ್ಷಿಕ 125 ಚಿತ್ರಗಳಿಗೆ ಕೊಡುತ್ತಿದ್ದ ಸಬ್ಸಿಡಿಯನ್ನು 200ಕ್ಕೆ ಏರಿಸಿದ್ದಾರೆ. ಇದನ್ನೂ ಓದಿ : ಏಳು ತಿಂಗಳ ಗರ್ಭಿಣಿಗೆ ಇದೆಂಥ ಟಾರ್ಚರ್? : ಶಾಕ್ ನಲ್ಲಿ ನಟಿ ಸಂಜನಾ
Advertisement
ನೆನ್ನೆ ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಈ ಕುರಿತು ನಿರ್ಮಾಪಕ ಮತ್ತು ಸಚಿವ ಮುನಿರತ್ನ ಸುಳಿವು ನೀಡಿದ್ದರು. ಸಿನಿಮಾ ರಂಗ ಎಂದೂ ಮರೆಯಲಾರದಂತಹ ಸುದ್ದಿಯನ್ನು ಮುಖ್ಯಮಂತ್ರಿಗಳು ಕೊಡಲಿದ್ದಾರೆ ಎಂದು ವೇದಿಕೆಯಲ್ಲೇ ಮಾತನಾಡಿದ್ದರು. ಇದನ್ನೂ ಓದಿ : ರವಿಚಂದ್ರನ್ ಸಿನಿಮಾ ಹಿರೋಯಿನ್ ಈಗ ನಿರ್ದೇಶಕಿ
Advertisement
Advertisement
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಕೋವಿಡ್ ನಿಂದ ನಿರ್ಮಾಪಕರು ಭಾರೀ ಹಾನಿಗೊಳಗಾಗಿದ್ದಾರೆ. ಹಾಗಾಗಿ 175 ಚಿತ್ರಗಳಿಗೆ ವಾರ್ಷಿಕ ಸಬ್ಸಿಡಿ ಕೊಡಿ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಸರಕಾರ ಇನ್ನೂ 25 ಚಿತ್ರಗಳನ್ನು ಸೇರಿಸಿ 200 ಚಿತ್ರಗಳಿಗೆ ಸಬ್ಸಿಡಿ ಕೊಡುವುದಾಗಿ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಇದನ್ನೂ ಓದಿ : ಮಾರ್ಚ್ 27ಕ್ಕೆ ಕೆಜಿಎಫ್ 2 ಟ್ರೈಲರ್ ರಿಲೀಸ್
Advertisement
2016ಕ್ಕೂ ಮುನ್ನ ಸರಕಾರ ವಾರ್ಷಿಕ ನೂರು ಚಿತ್ರಗಳಿಗೆ ಮಾತ್ರ ಸಬ್ಸಿಡಿ ನೀಡುತ್ತಿತ್ತು. ಅಂದಿನ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ 100 ಸಿನಿಮಾದಿಂದ 125 ಸಿನಿಮಾಗಳಿಗೆ ಏರಿಕೆ ಮಾಡಿ, ಒಂದೊಂದು ಚಿತ್ರಕ್ಕೆ ತಲಾ 10 ಲಕ್ಷ ರೂಪಾಯಿಯನ್ನು ಸಬ್ಸಿಡಿ ನೀಡುವುದಾಗಿ ಘೋಷಿಸಿದ್ದರು.