ನವದೆಹಲಿ: 2025 ಎಲ್ಲರಿಗೂ ಹೊಸ ಅವಕಾಶ, ಯಶಸ್ಸನ್ನು ತರಲಿ ಎಂದು ಹೊಸ ವರ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶುಭ ಹಾರೈಸಿದ್ದಾರೆ.ಇದನ್ನೂ ಓದಿ: ದೇಗುಲದಲ್ಲಿ ಪುರುಷರು ಶರ್ಟ್ ತೆಗೆಯುವ ಪದ್ಧತಿ ಅನಿಷ್ಟ – ಶಿವಗಿರಿ ಶ್ರೀ
Advertisement
Happy 2025!
May this year bring everyone new opportunities, success and endless joy. May everybody be blessed with wonderful health and prosperity.
— Narendra Modi (@narendramodi) January 1, 2025
Advertisement
ಈ ಕುರಿತು ಟ್ವೀಟ್ ಹಂಚಿಕೊಂಡಿರುವ ಮೋದಿ 2025ಕ್ಕೆ ಎಲ್ಲರಿಗೂ ಶುಭಾಶಯಗಳು, ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಸಂತೋಷವನ್ನು ತರಲಿ. ಹೊಸ ವರ್ಷ ಎಲ್ಲರಿಗೂ ಆರೋಗ್ಯ ಮತ್ತು ಸಮೃದ್ಧಿಯೊಂದಿಗೆ ಆಶೀರ್ವದಿಸಲಿ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.
Advertisement
Wishing everyone a very Happy New Year! May the year 2025 bring joy, harmony and prosperity to all! On this occasion, let us renew our commitment to work together for creating a brighter, more inclusive and sustainable future for India and the world.
— President of India (@rashtrapatibhvn) January 1, 2025
Advertisement
ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಹೊಸ ವರ್ಷದ ಶುಭಾಶಯಗಳನ್ನು ಹಂಚಿಕೊಂಡಿದ್ದು, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. 2025ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಈ ಸಂದರ್ಭದಲ್ಲಿ, ಭಾರತ ಮತ್ತು ಜಗತ್ತಿಗೆ ಉಜ್ವಲ ಮತ್ತು ಸುಸ್ಥಿರ ಭವಿಷ್ಯವನ್ನು ರಚಿಸಲು ಒಟ್ಟಾಗಿ ಕೆಲಸ ಮಾಡುವ ನಮ್ಮ ಬದ್ಧತೆಯನ್ನು ನವೀಕರಿಸೋಣ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.ಇದನ್ನೂ ಓದಿ: ವಂಚನೆ ಕೇಸಲ್ಲಿ ಐಶ್ವರ್ಯಗೌಡಗೆ ಜಾಮೀನು – ರಾತ್ರಿಯೇ ಜೈಲಿಂದ ರಿಲೀಸ್