ಬೆಂಗಳೂರು: 73 ವರ್ಷದ ಮುಂಬೈನ (Mumbai) ಯೋಗೇಶ್ ಹೆಸರು ಬದಲಾಯಿಸಲಾಗಿದೆಅವರು ಲಿವರ್ ಸಿರೋಸಿಸ್ ನೊಂದಿಗೆ ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಇವರಿಗೆ ಯಕೃತ್ತಿನ ಕಸಿ (Liver Transplant) ಹೊರತುಪಡಿಸಿ ಬೇರೆ ಯಾವುದೇ ಆಯ್ಕೆಯಿರಲಿಲ್ಲ. ಬೆಂಗಳೂರಿನ ಟ್ರಸ್ಟ್ ವೆಲ್ ಆಸ್ಪತ್ರೆಯ (Trustwell Hospitals) ಕಸಿ ಶಸ್ತ್ರಚಿಕಿತ್ಸಕರು, ಕಸಿ ಅರಿವಳಿಕೆ ತಜ್ಞರು ಮತ್ತು ತೀವ್ರತರವಾದ ತಜ್ಞರ ತಂಡವು ರೋಗಿಯನ್ನು ಬದುಕಿಸಲು ಸಂಕೀರ್ಣವಾದ ಯಕೃತ್ತಿನ ಕಸಿ ಮಾಡಿ ಇವರ ಬದುಕಿನಲ್ಲಿ ನೆಮ್ಮದಿಯ ನಗು ಮೂಡಿಸಿದರು.
Advertisement
ಯೋಗೇಶ್ ಅವರನ್ನು ಮೊದಲು ಹಿರಿಯ ಗ್ಯಾಸ್ಟ್ರೋ ಎಂಟರಾಲಜಿಸ್ಟ್ ಮತ್ತು ಹೆಪಟೊಲೊಜಿಸ್ಟ್ ಅವರಿಗೆ ತೋರಿಸಲಾಯಿತು. ಅವರು ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯಲು ತಕ್ಷಣವೇ ಟ್ರಾನ್ಸ್ ಆರ್ಟಿರಿಯಲ್ ಕೀಮೋ-ಎಂಬೋಲೈಸೇಶನ್ ಗೆ ಳಗಾಗಲು ತಿಳಿಸಿದರು. ಅದು ಅಲ್ಲದೇ ಯಕೃತ್ತಿನ ಕಸಿ ಮಾಡುವುದು ಕೂಡ ಅವಶ್ಯಕವಾಗಿತ್ತು. ಆದರೆ ಯೋಗೇಶ್ ಅವರು ಮಧುಮೇಹ ಹಾಗೂ ಸ್ಟೆಂಟ್ ಪ್ಲೇಸ್ ಮೆಂಟ್ ನೊಂದಿಗೆ ಪರಿಧಮನಿಯ ಆಂಜಿಯೋಗ್ರಫಿಗೆ (Angiography) ಒಳಗಾಗಿದ್ದರು. ಈ ಎಲ್ಲಾ ಕಾರಣದಿಂದಾಗಿ ಇವರಿಗೆ ಯಕೃತ್ತಿನ ಕಸಿ ಮಾಡುವುದು ಕೂಡ ತೀರಾ ಸವಾಲಿನ ಕೆಲಸವಾಗಿತ್ತು. ಇದನ್ನೂ ಓದಿ: ಮರಣದಂಡನೆಗೆ ಯಾವ ವಿಧಾನ ಸೂಕ್ತ?- ತಜ್ಞರ ವರದಿ ಕೇಳಿದ ಸುಪ್ರೀಂಕೋರ್ಟ್
Advertisement
Advertisement
ಈ ಎಲ್ಲಾ ಸವಾಲಿನ ನಡುವೆ ಮಾರ್ಚ್ 7ರಂದು ಮುಂಜಾನೆ ವೈದ್ಯರ ತಂಡವು 6 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆಯನ್ನು ನಡೆಸಿತು. ಕಸಿ ಶಸ್ತ್ರಚಿಕಿತ್ಸೆಯ ನಂತರ ಯೋಗೇಶ್ ಅವರಿಗೆ ಕಸಿ ಐಸಿಯು ನಲ್ಲಿ ಸರಿಯಾದ ಪೌಷ್ಠಿಕಾಂಶ ಹಾಗೂ ಫಿಸಿಯೋಥೆರಪಿ ನೀಡಿ 6 ದಿನಗಳಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಯಿತು. ಇದನ್ನೂ ಓದಿ: ರೆಡ್ ಕಾರ್ನರ್ ನೋಟಿಸ್ ಪಟ್ಟಿಯಿಂದ ಔಟ್- ಇನ್ನು ಮುಂದೆ ವಿಶ್ವದೆಲ್ಲೆಡೆ ವಂಚಕ ಮೆಹುಲ್ ಚೋಕ್ಸಿ ಸಂಚರಿಸಬಹುದು